ಇಸ್ಲಾಮಾಬಾದ್:- ಮುಂಬೈ ದಾಳಿಕೋರ ರಾಣಾ ತನ್ನ ಪ್ರಜೆಯಲ್ಲ ಎಂದು ಹೇಳುವ ಮೂಲಕ ದಿಢೀರ್ ಪಾಕ್ ಸ್ಪಷ್ಟನೆ ಕೊಟ್ಟಿದೆ.
ಶಿರಾ ಬಳಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ನಿರ್ಮಾಣ ; ಗೃಹ ಸಚಿವರ ಪ್ರತಿಕ್ರಿಯೆ ಹೀಗಿತ್ತು..
ಮುಂಬೈ ದಾಳಿಯ ಉಗ್ರ ತಹವ್ವೂರ್ ರಾಣಾ ತನ್ನ ಪ್ರಜೆಯಲ್ಲ, ಆತ ಕೆನಡಾದ ಪ್ರಜೆ ಎಂದು ಪಾಕಿಸ್ತಾನಹೇಳಿದೆ. ಅಮೆರಿಕದಿಂದ ರಾಣಾನನ್ನು ಭಾರತ ಕರೆ ತರುತ್ತಿದ್ದಂತೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಆತ ತನ್ನ ಹೆಸರನ್ನು ಹೇಳಬಹುದು ಎಂಬ ಭಯದಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡದ ಪಾಕ್ ಈಗ ದಿಢೀರ್ ಸ್ಪಷ್ಟೀಕರಣ ನೀಡಿದೆ. ಈ ಸಂಬಂಧ ವಾರದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಇಲಾಖೆ, ರಾಣಾ ಎರಡು ದಶಕಗಳಿಗೂ ಹೆಚ್ಚು ಕಾಲ ತನ್ನ ಪೌರತ್ವವನ್ನು ನವೀಕರಿಸದ ಕಾರಣ ಆತ ಪಾಕಿಸ್ತಾನಿ ಪ್ರಜೆಯಲ್ಲ ಎಂದು ಹೇಳಿದೆ.
ಕಳೆದ ಎರಡು ದಶಕಗಳಿಂದ ತಹವ್ವೂರ್ ರಾಣಾ ತನ್ನ ಪಾಕಿಸ್ತಾನಿ ದಾಖಲೆಗಳನ್ನು ನವೀಕರಿಸಿಲ್ಲ. ಇದರಿಂದ ಆತ ಕೆನಡಾ ಪ್ರಜೆ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದೆ.
ಕೊನೆಗೂ ಭಾರತಕ್ಕೆ ಬಂದ ಮುಂಬೈ ದಾಳಿ ಉಗ್ರ ರಾಣಾ:-
ಇನ್ನೂ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್ ರಾಣಾನನ್ನು ಕೊನೆಗೂ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಯಿತು.
ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್ ಆಗಿದೆ. ದೆಹಲಿಯಲ್ಲಿ ಎನ್‌ಐಎ ಬಂಧನ ಪ್ರಕ್ರಿಯೆ ನಡೆಸಿದೆ. ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ರಾಣಾ (64)ನನ್ನು ಲಾಸ್ ಏಂಜಲೀಸ್ ಮೆಟ್ರೋಪಾಲಿಟನ್ ಬಂಧನ ಕೇಂದ್ರದಲ್ಲಿ ಇರಿಸಲಾಗಿತ್ತು. ಅಮೆರಿಕದಲ್ಲಿ ಬೀಡುಬಿಟ್ಟಿರುವ ಭಾರತದ ಬಹು ಏಜೆನ್ಸಿ ತಂಡವು, ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ನಡೆಸಿತು.
ಭಾರತಕ್ಕೆ ಗಡೀಪಾರಾಗುವುದರಿಂದ ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಆತನ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತು. ಗಡೀಪಾರಿನಿಂದ ತಪ್ಪಿಸಿಕೊಳ್ಳುವ ರಾಣಾನ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ಇಂದು ಭಾರತಕ್ಕೆ ಕರೆತರಲಾಗುತ್ತಿದೆ.