IPL ಸೀಸನ್ 18 ಮುಕ್ತಾಯ ಹಂತಕ್ಕೆ ಬಂದಿದೆ. ಈಗಾಗಲೇ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್ಗೇರಿದೆ. ಇನ್ನುಳಿದ ಒಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ.
ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರಕ್ಕೆ ಅಡಚಣೆ, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಏಕೆಂದರೆ ಮುಂಬೈನ ಸುತ್ತ ಮುತ್ತ ಕಳೆದ ದಿನದಿಂದ ಭಾರೀ ಮಳೆಯಾಗುತ್ತಿದ್ದು, ಹೀಗಾಗಿ ಇಂದು
ಸಹ ವರುಣನ ಆರ್ಭಟ ಇರಲಿದೆ
ಆದರೆ ಇತ್ತ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮುಂಬೈ ಇಂಡಿಯನ್ಸ್ ತಂಡವು ಪ್ಲೇಆಫ್ಗೇರಲಿದೆ. ಅದೇ ವೇಳೆ ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಇಂದಿನ ಪಂದ್ಯದಲ್ಲಿ ಜಯ ಅನಿವಾರ್ಯ.
ಒಂದು ವೇಳೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಮಳೆಯಿಂದ ರದ್ದಾದರೆ ಯಾರು ಪ್ಲೇಆಫ್ಗೇರುವುದು ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಪೈಪೋಟಿ ಮುಂದುವರೆಯಲಿದೆ. ಅಂದರೆ ಇದು ಉಭಯ ತಂಡಗಳ 13ನೇ ಲೀಗ್ ಪಂದ್ಯವಾಗಿರುವುದರಿಂದ ಕೊನೆಯ ಪಂದ್ಯಕ್ಕೆ ಪ್ಲೇಆಫ್ ರೇಸ್ ಮುಂದುವರೆಯಲಿದೆ
ಏಕೆಂದರೆ ಇಂದಿನ ಪಂದ್ಯವು ಮಳೆಗೆ ಆಹುತಿಯಾದರೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಪಡೆಯಲಿದೆ. ಇದರಿಂದ ಮುಂಬೈ ಇಂಡಿಯನ್ಸ್ ತಂಡದ ಪಾಯಿಂಟ್ಸ್ 15 ಕ್ಕೇರಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಂಕವು 14 ಕ್ಕೆ ಏರಲಿದೆ.
ಇನ್ನು ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ 17 ಅಂಕಗಳೊಂದಿಗೆ ಪ್ಲೇಆಫ್ಗೇರಬಹುದು. ಅತ್ತ ಪಂಜಾಬ್ ಕಿಂಗ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೂ 16 ಅಂಕಗಳನ್ನು ಮಾತ್ರ ಪಡೆಯಲಿದೆ.
ಅಂದರೆ ಇಂದು ಮಳೆಯಿಂದಾಗಿ ಪಂದ್ಯ ರದ್ದಾದರೆ, ಮುಂಬೈ ಇಂಡಿಯನ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಗೆದ್ದು ಪ್ಲೇಆಫ್ಗೇರಬಹುದು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ಗೇರಬೇಕಿದ್ದರೆ, ಮುಂಬೈ ಇಂಡಿಯನ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುವುದನ್ನು ಎದುರು ನೋಡಬೇಕಾಗಿದೆ.