ಮಂಗಳೂರು:- ಇತ್ತೀಚೆಗೆ ಕೇಂದ್ರ ಸರ್ಕಾರವು ವಕ್ಫ್ ಮಸೂದೆ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದ್ದು, ಇದಕ್ಕೆ ಮುಸ್ಲಿಂ ಸಂಘಟನೆಗಳು ವ್ಯಾಪಕ ವಿರೋಧಿಸಿ ಪ್ರತಿಭಟನೆಗೆ ಕರೆ ಕೊಟ್ಟಿದೆ.
ಸಿದ್ದರಾಮಯ್ಯಗೆ ಜನಗಣತಿ ಬಗ್ಗೆ ಪ್ರಾಮಾಣಿಕ ಕಳಕಳಿ ಇಲ್ಲ: ಬಿವೈ ವಿಜಯೇಂದ್ರ!
ಹೌದು, ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ ರಂದು ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿವೆ. ಆದರೆ, ಪ್ರತಿಭಟನೆ ವೇಳೆ ರಸ್ತೆ ಸಂಚಾರ ನಿರ್ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಕ್ಫ್ ತಿದ್ದುಪಡಿ ವಿಚಾರ ಸುಪ್ರೀಂ ಕೋರ್ಟ್ ಪರಿಗಣಿಸುವಾಗ ಪ್ರತಿಭಟನೆ ಸರಿಯಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್ಹೆಚ್ 73 ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ. ಸರ್ಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಸರ್ಕಾರ ಅನುಮತಿ ನೀಡುವಾಗ ಸುಪ್ರೀಂಕೋರ್ಟ್ ವಿಚಾರಣೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪೀಠ ಹೇಳಿದೆ.