Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Myanmar earthquake: ಸಾವಿನ ಸಂಖ್ಯೆ 694 ಕ್ಕೆ ಏರಿಕೆ: ಭಾರತದಿಂದ ನೆರವಿನ ಹಸ್ತ!

    By Author AINMarch 29, 2025
    Share
    Facebook Twitter LinkedIn Pinterest Email
    Demo

    ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್‌ನಲ್ಲಿ ಶುಕ್ರವಾರ ಸಂಭವಿಸಿದ ಸರಣಿ ಭೂಕಂಪಗಳು ಸಾವುನೋವುಗಳಿಗೆ ಕಾರಣವಾಯಿತು. ನೂರಾರು ಕಟ್ಟಡಗಳು ಕುಸಿದವು. ಅವಶೇಷಗಳ ಕೆಳಗೆ ಜನರು ಪಕ್ಷಿಗಳಂತೆ ಪುಡಿಪುಡಿಯಾದರು. ಏತನ್ಮಧ್ಯೆ, ಶುಕ್ರವಾರ ರಾತ್ರಿ 11:56 ರ ಸುಮಾರಿಗೆ ಮ್ಯಾನ್ಮಾರ್‌ನಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಇನ್ನೂ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

    ರಸ್ತೆಗಳಲ್ಲೇ ಚಿಕಿತ್ಸೆ:
    ಮ್ಯಾನ್ಮಾರ್‌ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಬಂದೊದಗಿವೆ. ಇದರಿಂದ ಮ್ಯಾನ್ಮಾರ್‌ನ ನೈಪಿತಾವು ಸೇರಿ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

    ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!

    ಭಾರತದಿಂದ ನೆರವಿನ ಹಸ್ತ
    ಸಂತ್ರಸ್ತವಾಗಿರುವ ಮ್ಯಾನ್ಮಾರ್‌ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್‌, ಸೋಲಾರ್‌ ಲೈಟ್‌, ಜನರೇಟರ್‌ ಸೆಟ್‌ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್‌ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್‌ಗೆ ಕಳುಹಿಸಲಾಗುತ್ತಿದೆ.

    ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ:
    ಮ್ಯಾನ್ಮಾರ್‌, ಥಾಯ್ಲೆಂಡ್‌ನಲ್ಲಿ ಭೂಂಕಪದ ಬೆನ್ನಲ್ಲೇ ಶನಿವಾರ ಮುಂಜಾನೆ ಅಫ್ಘಾನಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಮುಂಜಾನೆ 5:16ಕ್ಕೆ ಭೂಮಿ ಕಂಪಿಸಿದ್ದು, ಭೂಮಿಯಿಂದ 180 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದ್ದೆ. ರಿಕ್ಟರ್‌ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಫ್ಘಾನಿಸ್ತಾನದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ!

    July 1, 2025

    ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!

    July 1, 2025

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ಮಸ್ಕ್ ಒಬ್ಬ ಅದ್ಭುತ ವ್ಯಕ್ತಿಆದ್ರೆ ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಹಾಗೆ ಇವೆ: ಟ್ರಂಪ್

    June 30, 2025

    ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ: ನೌಕಾಪಡೆಯಿಂದ ರಕ್ಷಣೆ

    June 30, 2025

    India-US: ಜುಲೈ 8 ರೊಳಗೆ ಭಾರತ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆ..!

    June 30, 2025

    ಪದ್ಮಶ್ರೀ ಪುರಸ್ಕೃತ ಕಣ್ಣಪ್ಪ ತಂಬಿರಾರ್’ಗೆ ವೀರಶೈವ ಮಹಾಸಭಾ ಅಭಿನಂದನೆ

    June 30, 2025

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು: ಚಿಕ್ಕಬಳ್ಳಾಪುರದ ಮೂವರು ಸಾವು!

    June 30, 2025

    ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಅಣ್ಣಾಮಲೈ!

    June 30, 2025

    ಚಲಿಸುವ ಬೈಕ್‌ನಲ್ಲೇ ರೊಮ್ಯಾನ್ಸ್ ಮಾಡಿದ ಲವ್ ಬರ್ಡ್ಸ್!

    June 29, 2025

    ಅರೇಂಜ್ಡ್​ ಮ್ಯಾರೇಜ್ ಆಗಿ ಅಮೆರಿಕಕ್ಕೆ ಹೋಗಿದ್ದ ಭಾರತೀಯ ಮಹಿಳೆ ನಾಪತ್ತೆ!

    June 29, 2025

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.