ಬೆಂಗಳೂರು: ಮೆಟ್ರೋ ಕಾಮಗಾರಿ ನಿರ್ಲಕ್ಷ್ಯಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಕಾಮಗಾರಿ ಎಡವಟ್ಟಿಗೆ ಆಟೋ ಚಾಲಕ ಬಲಿಯಾಗಿರುವ ಘಟನೆ ಕೋಗಿಲು ಕ್ರಾಸ್ ಬಳಿ ನಡೆದಿದೆ. ಕಾಸಿಂ ಸಾಬ್ (35) ಮೃತ ದುರ್ದೈವಿಯಾಗಿದ್ದು, ರಾತ್ರಿ ಮೆಟ್ರೋ ಕಾಮಗಾರಿಗೆಂದು ಲಾರಿಯಲ್ಲಿ ತರಲಾಗುತಿದ್ದ,
ವಯಾಡೆಕ್ಟ್ ಕೆಳಗೆ ಬಿದಿದ್ದು, ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಆಟೋ ಮೇಲೆ ಬಿದ್ದು, ಆಟೋ ಚಾಲಕ ಸಾವನಪ್ಪಿದ್ದಾರೆ. ಸರಿಸುಮಾರು ಮಧ್ಯರಾತ್ರಿ 12 ಗಂಟೆ ದುರಂತ ಸಂಭವಿಸಿದ್ದು, ಘಟನೆ ಬಳಿಕ ಕೊಂಚ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ಘಟನೆ ಕಣ್ಣಾರೆ ಕಂಡ ಜನ ಆತನ ರಕ್ಷಣೆಗೆ ದಾವಿಸಿದ್ದರು. ಆದರೆ ಬೃಹತ್ ಗಾತ್ರದ ವಯಾಡೆಕ್ಟ್ ತೆಗೆಯಲು ಕ್ರೇನ್ ಅತ್ಯಗತ್ಯವಾಗಿತ್ತು. ಸ್ಥಳಕ್ಕೆ ಪೊಲೀಸರು ಬಂದರೂ ಸಹ ಕ್ರೇನ್ ಮಾತ್ರ ಬರಲು ತಡವಾಯಿತು.
ಇದರಿಂದ ಆಕ್ರೋಶಗೊಂಡ ಜನ ಕಲ್ಲುತೂರಾಟ ಸಹ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಎರಡು ಗಂಟೆ ಬಳಿ ಕ್ರೇನ್ ತರಿಸಿ ವಯಾಡೆಕ್ಟ್ ಪಕ್ಕಕ್ಕೆ ಇಡುವ ಮೂಲಕ ಮೃತದೇಹ ಹೊರ ತೆಗೆಯಲಾಗಿದೆ. ಇನ್ನು ಈ ದುರಂತಕ್ಕೆ ಮೆಟ್ರೋ ಅಧಿಕಾರಿಗಳ ಬೇಜವಾಬ್ದಾರಿ ತನವೇ ಕಾರಣ ಅಂತ ಜನ ಆಕ್ರೋಶ ವ್ಯಕ್ತ ಪಡಿದಿದ್ದಾರೆ.