ನವದೆಹಲಿ:– ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.
ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು X ಮಾಡಿರುವ ಮೋದಿ, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನೂ ಅವಘಡದ ಕುರಿತು ಅವರು, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದು, ವಿಮಾನ ಅಪಘಾತದ ಕುರಿತು ಮಾಹಿತಿ ಪಡೆದಿದ್ದಾರೆ.