ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧೀ, ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಎಲ್ಲ ಸಚಿವರು, ಶಾಸಕರು, ಮುಖಂಡರು, 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ.
ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!
ದೇಶದ ವಿಷಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದೇವೆ. ಅವರೇ ರಾಜಕಾರಣ ಮಾಡುತ್ತಿದ್ದಾರೆ. ಇಷ್ಟು ಬೇಗ ಯಾರ ಮಾತು ಕೇಳಿ ನಿಲ್ಲಿಸಿದ್ದು? ಎಷ್ಟು ಸರಿ ಎಂದು ಪ್ರಧಾನಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇವೆ, ಇಡೀ ದೇಶ ಸೈನಿಕರ ಜೊತೆಯಿದೆ.
ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲವಿಲ್ಲ, 20ರಂದು ದೊಡ್ಡ ಸಮಾವೇಶ ಮಾಡುತ್ತೇವೆ, ವಿರೋಧಪಕ್ಷದವರು ಮೊದಲು ಅವರ ಪಕ್ಷ ಹೇಗಿದೆ ನೋಡಿಕೊಳ್ಳಲಿ. ಯತ್ನಾಳ ಕಥೆ ಏನಾಗಿದೆ ಎಂದು ಅವರಿಗೆ ಗೊತ್ತಿಲ್ಲವೆ? ಎಂದ ಅವರು ರಾಜ್ಯಕ್ಕೆ ಅನುದಾನ ಬರುವಲ್ಲಿ ಕೇಂದ್ರದಿಂದ ಅನ್ಯಾಯ ಆಗತಾ ಇದ್ದು, ಕೇಂದ್ರ ಸರ್ಕಾರದಿಂದ ಸಾಕಷ್ಟು ಹಣಬರಬೇಕು ನಮಗೆ, ಮಲತಾಯಿ ಧೋರಣೆ ತೋರಿಸುತ್ತಿದೆ.
ಮಹದಾಯಿ ಸೇರಿದಂತೆ ಅನೇಕ ಯೋಜನೆಗಳು ಹಾಗೇ ಇವೆ. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದೆ, ಯಾವ ಬೆಂಬಲವೂ ನೀಡುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂದು. ರಾಜ್ಯದ ಸಂಸದರು ರಾಜ್ಯದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಇನ್ನು ಭಾರತೀಯ ಜನತಾ ಪಕ್ಷದವರು ನಡೆಸುತ್ತಿರುವ ತಿರಂಗಾ ಯಾತ್ರಾ ಕುರಿತು ಪ್ರತಿಕ್ರಿಯೆ ಕೊಟ್ಟ ಅವರು, ಬೆಂಗಳೂರಲ್ಲಿ ತಿರಂಗಾ ಯಾತ್ರೆ ನಾವು ಮಾಡಿದ್ದೇವೆ. ಬಿಜೆಪಿಯವರು ಈಗ ಮಾಡುತ್ತಿದ್ದಾರೆ. ಅದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ. ಈ ವಿಷಯದಲ್ಲಿ ರಾಜಕಾರಣ ಮಾಡಬಾರದು ಎನ್ನುವುದು ನಮ್ಮ ಆಶಯ ಎಂದರು