ವಿಜಯಪುರ: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಡಿಕೆ ಬ್ರದರ್ಸ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಇದು ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಈ ನಡುವೆ, ಇಡಿ ಚಾರ್ಜ್ ಶೀಟ್ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಸರ್ಕಾರ ಏನು ಬೇಕಾದರೂ ಮಾಡಲಿ. ಎಲ್ಲಾ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿ ಡಿಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸುತ್ತಿದೆಯೇ ಎಂಬ ಪ್ರಶ್ನೆಗೆ ಇದು ಬರೀ ರಾಜಕಾರಣ ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.
ತಮನ್ನಾಗೆ ಮೈಸೂರು ಸ್ಯಾಂಡಲ್ ರೆಡ್ ಕಾರ್ಪೆಟ್ : KSDL ವಿರುದ್ಧ ಕನ್ನಡಿಗರ ಪ್ರೊಟೆಸ್ಟ್ :Video
ನ್ಯಾಶನಲ್ ಹೆರಾಲ್ಡ್ ದೇಣಿಗೆ ಹಗರಣದಲ್ಲಿ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಕೂಡ ಇದ್ದಾರೆ. ಡಿ.ಕೆ ಬ್ರದರ್ಸ್ ಕೂಡ ನ್ಯಾಶನಲ್ ಹೆರಾಲ್ಡ್ ಗೆ ದೇಣಿಗೆ ನೀಡಿದ್ದಾರೆ. ಆಂಧ್ರಪ್ರದೇಶ ಸಿಎಂ ರೇವಂತ್ ರೆಡ್ಡಿ ಕೂಡ ದೇಣಿಗೆ ನೀಡಿದ್ದಾರೆ ಎಂದು ಇಡಿ ಅಧಿಕಾರಿಗಳು ಕೋರ್ಟ್ ಗೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ..