ಬೆಂಗಳೂರು ಗ್ರಾಮಾಂತರ:- ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪಕ್ಷವನ್ನು ಸಮಯಕ್ಕೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದ್ದಾರೆ.
ಪ್ಯಾನ್ ಕಾರ್ಡ್’ಗೆ ಮುಕ್ತಾಯ ದಿನಾಂಕವಿದೆಯೇ..? ವ್ಯಕ್ತಿ ಸತ್ತ ನಂತರ PAN Cardಏನಾಗುತ್ತದೆ..?
ದೊಡ್ಡಬಳ್ಳಾಪುರ ತಾಲ್ಲೂಕಿನ ಅಭಿವೃದ್ಧಿ ವಿಚಾರದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಪೈಟ್ ವಿಚಾರವಾಗಿ ಮಾತನಾಡಿ, ಜೆಡಿಎಸ್ ಪಕ್ಷದಲ್ಲಿ 25 ವರ್ಷದಿಂದ ತಾಲ್ಲೂಕಿನಲ್ಲಿ ಯಾರು ಶಾಸಕರಾಗಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಸಮಯಕ್ಕೆ ಬೇಕಾದಂತೆ ಜೆಡಿಎಸ್ ಪಕ್ಷವನ್ನು ಬಳಸಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಮೈತ್ರಿಯಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಕೆಸರೆರಚಾಟ ಬಿಡಿ. ಬಿಜೆಪಿ ಮತ್ತು ಕಾಂಗ್ರೆಸ್ ಸೇರಿ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಎಂದು ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಹರೀಶ್ ಗೌಡ ಹೇಳಿಕೆ ಕೊಟ್ಟಿದ್ದಾರೆ.