ನವದೆಹಲಿ: ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಶನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಬಳಿಕ ಪಾಕ್ ಹಾಗೂ ಭಾರತ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,
ಇದೀಗ ವಿದೇಶಾಂಗ ಸಚಿವ ಎಸ್.ಜೈಶಂಕರ್‌ಗೆ ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಬುಲೆಟ್ ಪ್ರೂಫ್ ಕಾರು, ಕಮಾಂಡೋ ಸೆಕ್ಯೂರಿಟಿಯನ್ನು ನೀಡಲಾಗಿದೆ. ಏ.22ರಂದು ನಡೆದ ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಜೋರಾಗಿದ್ದು, ಕದನ ವಿರಾಮ ಘೋಷಣೆಯಾದ ಬಳಿಕ ವಿದೇಶಾಂಗ ಸಚಿವಾಲಯದ ವಿನಂತಿ ಮೇರೆಗೆ 25 ಪ್ರಮುಖರಿಗೆ ನೀಡುವ ಭದ್ರತೆಯನ್ನು ಹೆಚ್ಚಿಸಲಾಗಿದೆ.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರು ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 25 ವಿಐಪಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಪಟ್ಟಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಜೆಪಿ ನಡ್ಡಾ, ಭೂಪೇಂದರ್ ಯಾದವ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಸುಧಾಂಶು ತ್ರಿವೇದಿ ಹಾಗೂ ಬಿಜೆಪಿಯ ಪ್ರಮುಖ ನಾಯಕ ಮುರಳಿ ಮನೋಹರ್ ಜೋಶಿ ಅವರ ಹೆಸರಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ Z ಸೆಕ್ಯೂರಿಟಿ ಹೊಂದಿರುವ ಜೈಶಂಕರ್ ಅವರಿಗೆ ಮತ್ತೆ ಭದ್ರತೆ ಹೆಚ್ಚಿಸಲಾಗಿದ್ದು, ಒಂದು ಬುಲೆಟ್ ಪ್ರೂಫ್ ಕಾರು, 4-6 ಕಮಾಂಡೋ ಸೇರಿ 22 ಸಿಬ್ಬಂದಿ, ಭದ್ರತೆಗೆ ಬೆಂಗಾವಲು ವಾಹನಗಳು, 33 ಸಿಆರ್‌ಪಿಎಫ್ ಕಮಾಂಡೋ ಹಾಗೂ ದಿನದ 24/7 ಭದ್ರತೆ ನೀಡಲಾಗಿದೆ. ಜೊತೆಗೆ ದೆಹಲಿಯಲ್ಲಿರುವ ಸರ್ಕಾರಿ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದಕ್ಕೂ ಮುನ್ನ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಜೈಶಂಕರ್ ಅವರ ಭದ್ರತೆಯನ್ನು Y ನಿಂದ Zಗೆ ಹೆಚ್ಚಿಸಲಾಗಿತ್ತು.
ಭದ್ರತೆಗಾಗಿ ಒದಗಿಸುತ್ತಿರುವ ಕಾರುಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್ ಇರಿಸುವಂತೆ ಹಾಗೂ ಭದ್ರತಾ ಸಿಬ್ಬಂದಿಗೆ ಫೈರಿಂಗ್ ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಕುರಿತು ತರಬೇತಿ ನೀಡುವಂತೆ ತಿಳಿಸಲಾಗಿದೆ.