ಬೆಂಗಳೂರು: ಕಳೆದ ವಾರ ಸುರಿದ ಭಾರಿ ಮಳೆಯಿಂದ ಗ್ರೇಟರ್ ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸುವ ಮಹತ್ವದ ಸಭೆಗೆ ಜೆಡಿಎಸ್ ನ ವಿಧಾನ ಪರಿಷತ್ ಶಾಸಕರಿಗೆ ಆಹ್ವಾನ ನೀಡಿಲ್ಲ. ಇದು ಜೆಡಿಎಸ್ ವಿಧಾನ ಪರಿಷತ್ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಅಸಮಾಧಾನ ಹೊರಹಾಕಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ.ಶರವಣ, ಡಿಸಿಎಂ ಡಿಕೆಶಿಗೆ ಸಂವಿಧಾನ ಪಾಠ ಮಾಡಿದ್ದಾರೆ.
ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!
ಸಂವಿಧಾನ ಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಡಿಸಿಎಂ ಆಗಿರುವ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯನಿರ್ವಹಣೆ ಕೂಡ ಸಂವಿಧಾನ ರೀತಿಯಲ್ಲಿ ಮಾಡಬೇಕೆಂಬ ಸತ್ಯವನ್ನು ಮರೆತಿದ್ದಾರೆ. ಆಡಳಿತದ ಚುಕ್ಕಾಣಿ ಹಿಡಿದ ಮಾತ್ರಕ್ಕೆ ಶಿಷ್ಟಾಚಾರ ಉಲ್ಲಂಘಿಸಬಹುದೆಂಬುದು ಅವರ ನಿಲುವಾಗಿದೆಯೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರೇಟರ್ ಬೆಂಗಳೂರು, ಮಳೆಹಾನಿ ಮತ್ತು ಬೆಂಗಳೂರು ಅಭಿವೃದ್ಧಿ ಬಗ್ಗೆ ಚರ್ಚಿಸಲು ಕರೆದಿರುವ ಸಭೆಗೆ ಬಿಜೆಪಿ ಮತ್ತು ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ವನ್ನೇ ನೀಡಿಲ್ಲ. ಇದರಿಂದ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆ ಜೊತೆಗೆ, ವಿಧಾನ ಪರಿಷತ್ ನ ಪ್ರತಿಪಕ್ಷ ಸದಸ್ಯರ ಹಕ್ಕಿನ ಚ್ಯುತಿ ಆಗಿದೆ ಎಂದು ಕಿಡಿಕಾರಿದ್ದಾರೆ.
ಸಭೆಯ ಆಹ್ವಾನ ಪತ್ರದಲ್ಲಿ ಬೆಂಗಳೂರು ಮೂಲ ನೆಲೆಯಲ್ಲಿ ಗುರುತಿಸಿಕೊಂಡಿರುವ ತಾವು ಜೆಡಿಎಸ್ ನ ಮತ್ತೊಬ್ಬ ಹಿರಿಯ ನಾಯಕ ಜವರಾಯಿಗೌಡ, ಬಿಜೆಪಿ ವಿಧಾನಪರಿಷತ್ ಸದಸ್ಯರ ಹೆಸರೇ ಇಲ್ಲ. ಕೆಲ ದಿನಗಳ ಹಿಂದೆ ಜೆಡಿಎಸ್ ಶಾಸಕಾಂಗ ಪಕ್ಷದ ನಿಯೋಗ ಬೆಂಗಳೂರಿನ ವಿವಿಧಡೆ ಮಳೆ ನೀರಿನಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿ ಮುಂದೆ ಕರೆಯುವ ಸಭೆಯಲ್ಲಿ ಚರ್ಚಿಸುವ ಬಗ್ಗೆ ತೀರ್ಮಾನಿಸಿದೆವು. ಆದರೆ, ನಮ್ಮನ್ನು ನಿರ್ಲಕ್ಷ್ಯ ಮಾಡೋ ಮೂಲಕ ಅಧಿಕಾರದ ದುರ್ಬಳಕೆ ಮತ್ತು ಸ್ವೇಚ್ಛಾಚಾರ ವರ್ತನೆ ತೋರಿದ್ದಾರೆ ಎಂದು ಟಿ.ಎ.ಶರವಣ ಹೇಳಿದ್ದಾರೆ.
ಜೆಡಿಎಸ್ ಶಾಸಕರ ವಿಚಾರದಲ್ಲಿ ತಾರತಮ್ಯ ಎಸಗಿರುವುದು ಸ್ಪಷ್ಟವಾಗಿ ಗೊತ್ತಾಗುತ್ತೆ. ವಿಧಾನ ಪರಿಷತ್ ನ ಕಾಂಗ್ರೆಸ್ ಶಾಸಕರಿಗೆ ಆಹ್ವಾನ ನೀಡಲಾಗಿದೆ. ಆದರೆ ಜೆಡಿಎಸ್ ಶಾಸಕರ ಹೆಸರು ಪಟ್ಟಿಯಲ್ಲಿ ಇಲ್ಲ. ಇದು ಖಂಡಿತವಾಗಿ ಹಕ್ಕುಚ್ಯುತಿ ಆಗಿದೆ ಎಂದು ಹೇಳಿದ್ದಾರೆ. ನಮ್ಮನ್ನು ದೂರ ಇಟ್ಟು ಸಭೆ ಮಾಡುವ ಉದ್ದೇಶ ಏನು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ