ಐಪಿಎಲ್ 18ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (ಆರ್ಸಿಬಿ) ಚಾಂಪಿಯನ್ ಆಗಿ ಹೊರ ಹೊಮ್ಮಿಸಿದ್ದು, ಇದೇ ಖುಷಿಯಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದು,
50 ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್ಸಿಎ)ಯ ಆಡಳಿತ ಸಮಿತಿ ಸದಸ್ಯರ ವಿರುದ್ಧ ಮುಂದಿನ ವಿಚಾರಣೆವರೆಗೂ ಆತುರದ ಕ್ರಮ ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿದೆ.
ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಸಮಿತಿಯ ಅಧ್ಯಕ್ಷರಾದ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್.ಜಯರಾಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರ ಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಅರ್ಜಿದಾರರು ತನಿಖೆಗೆ ಸಹಕರಿಸಬೇಕು.
ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬುದಾಗಿ ತಿಳಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಮುಂದಿನ ಆದೇಶದವರೆಗೂ ಆತುರದ ಕ್ರಮಕ್ಕೆ ಮುಂದಾಗಬಾರದು ಎಂದು ನ್ಯಾಯಪೀಠ ಆದೇಶಿಸಿ, ಜೂನ್ 16ಕ್ಕೆ ವಿಚಾರಣೆ ಮುಂದೂಡಿತು.
ಘಟನೆ ಸಂಬಂಧ ಸರ್ಕಾರ ನ್ಯಾಯಾಂಗ ತನಿಖೆ, ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸುತ್ತಿದೆ. ಜೊತೆಗೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಹೈಕೋರ್ಟ್ ಸಹ ಸ್ವಯಂಪ್ರೇರಿತವಾಗಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ ಎಂಬ ಅರ್ಜಿದಾರರ ವಾದವನ್ನು ಪೀಠ ಆದೇಶದಲ್ಲಿ ತಿಳಿಸಿದೆ.