ಬೆಂಗಳೂರು: ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಯಾವುದೇ ಸಭೆ ನಡೆಸಿಲ್ಲ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಚಿವರು ಸರ್ಕಿಟ್ ಹೌಸ್ನಲ್ಲಿ ಇದ್ದ ವೇಳೆ ಮುಸ್ಲಿಂ ಸೇರಿದಂತೆ ಇತರ ಸಮುದಾಯದ ಹಾಗೂ ಸಂಘ ಸಂಸ್ಥೆಗಳ ಮುಖಂಡರ ನಿಯೋಗ ಭೇಟಿ ನೀಡಿತ್ತು.
ನಿಯೋಗದ ಅಹವಾಲುಗಳನ್ನು ಆಲಿಸಿದ್ದೇವೆಯೇ ಹೊರತು ಪೊಲೀಸರ ಸಮಕ್ಷಮದಲ್ಲಿ ಮುಸ್ಲಿಂ ಮುಖಂಡರ ಜೊತೆ ಯಾವುದೇ ಸಭೆ ನಡೆಸಿಲ್ಲ. ಬೆಳಗ್ಗೆ 7 ಗಂಟೆಯಿಂದ 11 ಗಂಟೆವರೆಗೆ ಇಬ್ಬರೂ ಸರ್ಕಿಟ್ ಹೌಸ್ನಲ್ಲಿ ತಂಗಿದ್ದೆವು.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರುಗಳಿಗೆ ಭೇಟಿ ನೀಡಲು ಅವಕಾಶವಿತ್ತು. ಮೇಲೆ ತಿಳಿಸಲಾದ ನಿಯೋಗದ ಹೊರತಾಗಿ, ಬೇರೆ ಇತರ ಮುಖಂಡರು ಹಾಗೂ ನಿಯೋಗಗಳಿಗೆ ಸಚಿವರನ್ನು ಭೇಟಿ ಮಾಡಲು ಸಮಯವಕಾಶವಿತ್ತು ಎಂದು ಹೇಳಿದ್ದಾರೆ.