ಬೆಂಗಳೂರು: ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ.
ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಪಕ್ಷ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ? ಎಂದರು.
ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ!
ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಹೆಚ್ಚಿನಂಶ ಯಾರು ಅಧಿಕಾರದಲ್ಲಿರುತ್ತಾರೆ, ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶವಿರುತ್ತದೆ.
ನಮಗೆಲ್ಲರಿಗೂ ಕೂಡ ಜವಾಬ್ಧಾರಿ ಇರಬೇಕಾಗುತ್ತದೆ. ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷರು, ನಮ್ಮ ಪಕ್ಷದ ಪ್ರತಿನಿಧಿಗಳು ಕೂಡ ಘಟನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.