ಬೆಳಗಾವಿ: ದೇಶದಲ್ಲಿ ಹತ್ಯೆಗೊಳಗಾಗಿ ಸಾಯುವವರಿಗಿಂತ, ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಇಂದು ಬೆಳ್ಳಗೆಯಷ್ಟೆ ಎಂಬಿಎ ಪದವೀಧರೆ ಪಿ.ಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು.
ಇದೀಗ ಮತ್ತೋರ್ವ ಯುವತಿ ನನ್ನ ಸಾವಿಗೆ ನಾನೇ ಕಾರಣವೆಂದು ಗೋಡೆ ಮೇಲೆ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಜಾಹ್ನವಿ(22) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ, ನನ್ನ ಮೇಲೆ ಯಾರೂ ವಿಶ್ವಾಸವಿಡುತ್ತಿಲ್ಲ. ನನಗೆ ಯಾರೂ ಸ್ನೇಹಿತರು ಇಲ್ಲ, ಅಪ್ಪ ಅಮ್ಮ ಕೂಡ ನಂಬುತ್ತಿಲ್ಲ. ಪೋಷಕರು ನನ್ನ ಮಾತಿಗೆ ಸ್ಪಂದಿಸುತ್ತಿಲ್ಲ, ಕಾಳಜಿ ವಹಿಸುತ್ತಿಲ್ಲ. ಮತ್ತೆ ಹುಟ್ಟಿ ಬರುತ್ತೇನೆ ಎಂದು ಗೋಡೆ ಮೇಲೆ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೋಷಕರು ಹಾಸನದಲ್ಲಿ ಕೆಲಸ ಮಾಡುತ್ತಿದ್ದರೆ, ಜಾಹ್ನವಿ ಓದಲು ಬೆಳಗಾವಿಯಲ್ಲಿ ಚಿಕ್ಕಪ್ಪನ ಮನೆ ಮೇಲೆ ರೂಮ್ ಮಾಡಿಕೊಂಡಿದ್ದಳು. ಆದ್ರೆ, ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಮರಣೋತ್ತರ ಪರೀಕ್ಷೆ ನಡೆಸಿ ಜಾಹ್ನವಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿಲಾಗಿದ್ದು, ಈ ಬಗ್ಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.