ಬೆಂಗಳೂರು:– ಡೀಸೆಲ್ ಬೆಲೆ ಏರಿಕೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ.
ಕಾಂಗ್ರೆಸ್ ನಾಯಕರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ: ಬಿ.ವೈ ವಿಜಯೇಂದ್ರ!
ಹೀಗಾಗಿ ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನಡೆಸಿದ ಸಭೆ ವಿಫಲವಾಗಿದೆ. ಮುಷ್ಕರ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ.
ಹೀಗಾಗಿ ಮತ್ತೊಮ್ಮೆ ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಅವರು, ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾವು ತೀರ್ಮಾನ ಮಾಡಿಯಾಗಿದೆ. ಮುಖ್ಯಮಂತ್ರಿಗಳು ಮುಷ್ಕರ ಹಿಂಪಡೆಯಲು ಹೇಳಿದರು, ಆದ್ರೆ, ಆಗಲ್ಲ ಅಂದ್ವಿ. ನಾಳೆಯಿಂದ ಅನಿರ್ದಿಷ್ಟಾವಧಿ ಉಗ್ರ ಹೋರಾಟ
ಮಾಡ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:
• ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು.
• ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
• ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ.
• ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲಿಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದರು.
• ಗೃಹ ಸಚಿವ ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.