ಕೋಲಾರ: ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ಭಾರತ ಹಾಗೂ ಪಾಕಿಸ್ತಾನ ಮಧ್ಯೆ ವಾರ್ ವಿಚಾರಕ್ಕೆ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, 26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ. ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!
ಸಾಮಾನ್ಯ ಪ್ರಜೆಗಳ ಮೇಲೆ ಯುದ್ದ ಮಾಡುವುದಕ್ಕೆ ನಮ್ಮ ವಿರೋಧವಿದೆ. ಆದರೆ, ನಮ್ಮ ದೇಶದೊಳಗೆ ಬಂದು ಪತ್ನಿಯರ ಎದುರೇ ಪತಿಯರನ್ನು ಹೊಡೆದರೆ ಹೇಗೆ ಸಹಿಸುವುದು? ಆ ಹೆಣ್ಣು ಮಕ್ಕಳು ಗಟ್ಟಿಯಾಗಿರುವುದಕ್ಕೆ ಪರವಾಗಿಲ್ಲ.
ಇಲ್ಲಾ ಅಂದರೆ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದರು. ಅಂತಹದಕ್ಕೆ ಪರಿಹಾರ ಇದಲ್ಲ. ಬೇರಿನಿಂದ ಕೊಂಬೆ ತನಕ ಎಲ್ಲವನ್ನೂ ಹೊಡೆಯಬೇಕು. ಈ ಬಾರಿ ಒಳ್ಳೆಯ ಅವಕಾಶ ಇತ್ತು, ಆದರೆ ಏನೂ ಮಾಡಿಲ್ಲ ಎಂಬುದು ಬೇಸರ ತಂದಿದೆ ಎಂದರು.
ಆಪರಷೇನ್ ಸಿಂದೂರ್ ಹೆಸರಿನಲ್ಲಿ ಅಷ್ಟು ಜನ, ಇಷ್ಟು ಜನ ಉಗ್ರರನ್ನು ಹೊಡೆದಿದ್ದೇವೆ ಎನ್ನುತ್ತಾರೆ. ಆದರೆ, ಇಲ್ಲಿಯವರೆಗೂ ಎಲ್ಲೂ ದೃಢವಾಗಿಲ್ಲ. ಮಾಧ್ಯಮಗಳಲ್ಲಿ ಬಂದಿದ್ದು ಬಿಟ್ಟರೆ ಎಲ್ಲೂ ನೋಡಿಲ್ಲ ಎಂದು ಅವರು ಹೇಳಿದರು.