ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಎಮ್‌ಎಲ್‌ಸಿ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ಆರೋಪ ಭಾರೀ ಚರ್ಚೆಗೆ ಗುರಿಯಾಗಿದೆ. ಇದನ್ನೇ ಅಸ್ತ್ರವಾಗಿಟ್ಟುಕೊಂಡು ಕಾಂಗ್ರೆಸ್ ನಾಯಕರು ಬಿಜೆಪಿ ಎಂಎಲ್‌ಸಿ ವಿರುದ್ಧ ಬಾಣ ಬೀಸುತ್ತಲೇ ಇದ್ದಾರೆ.
ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..
ಇದೀಗ ಎಫ್ಐಆರ್ ಪ್ರಶ್ನಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಿಂದು ನ್ಯಾಯಾಲಯದ ಕಲಾಪ ಪ್ರಾರಂಭವಾಗುತ್ತಿದ್ದಂತೆ ರವಿಕುಮಾರ್ ಪರ ವಕೀಲರು, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ಪೀಠಕ್ಕೆ ಮನವಿ ಮಾಡಿದರು. ವಕೀಲರ ಮನವಿ ಪರಿಗಣಿಸಿದ ನ್ಯಾಯಪೀಠ, ಇಂದು ಮಧ್ಯಾಹ್ನ ಅರ್ಜಿ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ತಿಳಿಸಿತು.
ಬಿಜೆಪಿ ಪಕ್ಷದಿಂದ ಜುಲೈ 1 ರಂದು ವಿಧಾನಸೌಧ ಆವರಣದ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್ ಅವರ ಕುರಿತು ಅಪಮಾನಕರ ಪದಗಳನ್ನು ಬಳಸಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.