ಬೆಂಗಳೂರು:-ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಮಾಡಿದ ಆರೋಪದಡಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಮಳೆಗಾಲದಲ್ಲಿ ಬಟ್ಟೆಗಳನ್ನು ಮನೆಯೊಳಗೆ ಒಣಗಿಸುವುದು ಹೇಗೆ? ಇದನ್ನು ಓದಿ!
ಜೂನ್ 8ರ ವರೆಗೆ ಬಂಧಿಸಂದಂತೆ ಆದೇಶ ನೀಡಿರುವ ಕೋರ್ಟ್ ತನಿಖೆಗೆ ಸಹಕರಿಸುವಂತೆ ರವಿಕುಮಾರ್‌ಗೆ ಅವರಿಗೆ ಸೂಚನೆ ನೀಡಿದೆ.
ರವಿಕುಮಾರ್ ಹೇಳಿದ್ದೇನು?
ಬಿಜೆಪಿ ಪಕ್ಷದಿಂದ ಜುಲೈ 1 ರಂದು ವಿಧಾನಸೌಧ ಆವರಣದ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್ ಅವರ ಕುರಿತು ಅಪಮಾನಕರ ಪದಗಳನ್ನು ಬಳಸಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.
ಈ ಸಂಬಂಧ ಜೆ.ಪಿ.ನಗರದ ನಿವಾಸಿ, ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಗರ್ತನಾ ಅವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ದೂರಿನಲ್ಲಿ ರವಿಕುಮಾರ್ ಅವರ ಹೇಳಿಕೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಅಗೌರವ ತಂದಿದೆ. ಮುಖ್ಯ ಕಾರ್ಯದರ್ಶಿಯಾದ ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದು ಉಂಟು ಮಾಡಿ, ಇಡೀ ಮಹಿಳಾ ಕುಲಕ್ಕೆ ಅಗೌರವ ತೋರಿದಂತೆ ಆಗಿದೆ. ಆರೋಪಿತರ ಮಾತು ಲೈಂಗಿಕ ಅರ್ಥ ಛಾಯೆ ಬರುವ ಮಾತಾಗಿದೆ. ಇದು ಮುಖ್ಯಕಾರ್ಯದರ್ಶಿಯವರ ಖ್ಯಾತಿಗೆ ಹಾನಿ ಉಂಟು ಮಾಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ದೂರಿನ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ರವಿಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು. ಈ ನಡುವೆ ಎಫ್ಐಆರ್ ಪ್ರಶ್ನಿಸಿ ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.