ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಮಾದರಿಯಲ್ಲಿ ನಡೆದಿದ್ದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ನಡೆದಿದ್ದ ದಾಳಿ ಪ್ರಕರಣ ವಾಪಸ್ ಪಡೆದ ರಾಜ್ಯ ಸರ್ಕಾರದ ಆದೇಶವನೇ ಹೈಕೋರ್ಟ್ ರದ್ದು ಮಾಡಿದೆ.
2024ರ ಅಕ್ಟೋಬರ್ 10ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳ ಮೇಲಿದ್ದ ಕೇಸ್ ಗಳನ್ನು ರದ್ದುಗೊಳಿಸಲಾಗಿತ್ತು.
ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ, ಇದು ಅನಾಗರಿಕ: ಆರ್.ಅಶೋಕ್ ಕಿಡಿ
ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ದ್ವಿಸದಸ್ಯ ಪೀಠ, ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.
ಪಿಐಎಲ್ ವಿಚಾರಣೆಯ ಸಂದರ್ಭದಲ್ಲೇ ಹೈಕೋರ್ಟ್ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು.