Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ, ಇದು ಅನಾಗರಿಕ: ಆರ್‌.ಅಶೋಕ್‌ ಕಿಡಿ

    By Author AINMay 28, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.
    ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್‌ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ ಎಂದು ಟೀಕಿಸಿದರು.
    ಈ ಮೊದಲು ನಗರದಲ್ಲಿ ಸೆಸ್‌ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್‌ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್‌ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇನ್ನು ಬಳಕೆದಾರರ ಶುಲ್ಕವೂ ಸೇರಿದರೆ 500-600 ಕೋಟಿ ರೂ. ಸಂಗ್ರಹವಾಗುತ್ತದೆ. ಯಾರ ಮನೆ ಹಾಳು ಮಾಡಲು ಸರ್ಕಾರ ಇಷ್ಟು ಹಣವನ್ನು ಸಂಗ್ರಹಿಸುತ್ತಿದೆ? ಎಂದು ಪ್ರಶ್ನೆ ಮಾಡಿದರು.
    ಒಂದೋ ಬಳಕೆದಾರರ ಶುಲ್ಕ, ಇಲ್ಲವಾದರೆ ಸೆಸ್‌ ಸಂಗ್ರಹಿಸಬೇಕು. ಆದರೆ ಬೆಂಗಳೂರಿನಲ್ಲಿ ಎರಡೂ ಶುಲ್ಕ ವಿಧಿಸಲಾಗಿದೆ. ಇದರಿಂದಾಗಿ ಮನೆಗಳ ಬಾಡಿಗೆ ದರ ಹೆಚ್ಚಲಿದೆ. ವಾಣಿಜ್ಯ ಕಟ್ಟಡಗಳ ಬಾಡಿಗೆ, ಕಲ್ಯಾಣ ಮಂಟಪ, ಆಸ್ಪತ್ರೆ, ಶಾಲೆ, ಹೋಟೆಲ್‌ಗಳ ದರ ಹೆಚ್ಚಲಿದೆ. ಒಂದು ತೆರಿಗೆಯಿಂದಾಗಿ ಎಲ್ಲ ದರಗಳು ಹೆಚ್ಚಲಿದೆ. ಬೆಂಗಳೂರಿನ ಜನರನ್ನು ಕಾಂಗ್ರೆಸ್‌ ದರೋಡೆ ಮಾಡುತ್ತಿದೆ. ಇದು ಕೇಂದ್ರ ಸರ್ಕಾರದ ಕಾಯ್ದೆ ಎಂದು ನೆಪ ಹೇಳುತ್ತಾರೆ. ಎರಡು ಬಗೆಯ ಶುಲ್ಕ ವಿಧಿಸಬೇಕೆಂದು ಕೇಂದ್ರ ಸರ್ಕಾರ ಎಲ್ಲೂ ಹೇಳಿಲ್ಲ ಎಂದು ಅಶೋಕ್‌ ಹೇಳಿದರು.

    ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !

    ಜನಪ್ರತಿನಿಧಿ ಸಭೆ ನಡೆಸಿ
    ಬೆಂಗಳೂರಿನ ಶಾಸಕರ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕು. ಹಿಂದೆ ಚದರ ಅಡಿಗೆ ತಕ್ಕಂತೆ ಕಸದ ಸೆಸ್‌ ವಿಧಿಸಲಾಗುತ್ತಿತ್ತು. ಅದೇ ಮಾದರಿಯನ್ನು ಈಗ ಮತ್ತೆ ತರಬೇಕು. ಬೇರೆ ಯಾವುದೇ ನಗರಗಳಲ್ಲಿ ಇಷ್ಟು ಶುಲ್ಕವಿಲ್ಲ. ಇದು ಅನಾಗರಿಕ ನಡೆ. ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಗಾಗಿ ನಗರದ ಜನರಿಂದ ಇಷ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆ. ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆರ್‌ ಆಗ್ರಹಿಸಿದ್ದಾರೆ.
    ಈಗಾಗಲೇ ಬೆಂಗಳೂರಿನ ಜನರು ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.
    ಗ್ಯಾರಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಇದಕ್ಕಾಗಿ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ನಡೆದಿದೆ. ಕಾಂಗ್ರೆಸ್‌ಗ ಮತ ನೀಡಿದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಸೀಮಿತವಾಗಲಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಎಲೆಕ್ಟ್ರಿಕ್ ಬಸ್ ರಿಪೇರಿ ಮಾಡುವಾಗ ಬೆಂಕಿ ಅವಘಡ: ಮೆಕ್ಯಾನಿಕ್ ಸ್ಥಿತಿ ಗಂಭೀರ!

    May 29, 2025

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025

    ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್

    May 29, 2025

    ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಬಿಂದಾಸ್‌ ಟಾಕ್

    May 29, 2025

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    35 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವಾಹಿನಿಯ ರಿಯಲ್‌ ಸ್ಟಾರ್ಸ್ ಅವಾರ್ಡ್ಸ್‌ ಪ್ರದಾನ‌

    May 29, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಸಾಧ್ಯತೆ!

    May 29, 2025

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

    May 29, 2025

    Bengaluru: ಪಕ್ಕದ ಕಾರಿಗೆ ನೀರು ಹಾರಿಸಿದ್ದಕ್ಕೆ ವ್ಯಕ್ತಿಯ ಬೆರಳು ಕಟ್!

    May 29, 2025

    ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 29, 2025

    ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

    May 29, 2025

    ಬಿಜೆಪಿ ಮುಖಂಡ ಪ್ರಿಯಾಂಗು ಪಾಂಡೆ ಮೇಲೆ ಗುಂಡಿನ ದಾಳಿ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್!

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.