ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮೇಲೆ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ಸಿಗೆ ಕಾರಣಾದ ಸೈನಿಕರನ್ನು ಇಡೀ ದೇಶವೇ ಕೊಂಡಾಡುತ್ತಿದೆ.
ಕಳೆದ ವಾರ ಬೆಂಗಳೂರಿನಲ್ಲಿ ತಿರಂಗಾಯಾತ್ರೆ ನಡೆಸಿದ್ದ ಕಾಂಗ್ರೆಸ್ ನಾಯಕರು, ಇಂದಿನಿಂದ ದೇಶಾದ್ಯಂತ ಪಾಕಿಸ್ತಾನದ ಸೇನಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಸೈನಿಕರನ್ನು ಗೌರವಿಸುವ ಜೈಹಿಂದ್ ಅಭಿಯಾನ ಹಮ್ಮಿಕೊಂಡಿದೆ.
ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕೆಪಿಸಿಸಿ ವತಿಯಿಂದ ಜೈಹಿಂದ್ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಯೋಧರನ್ನು ಗೌರವಿಸುವ ಮೂಲಕ ಚಾಲನೆ ನೀಡಿದರು. ಡಿಸಿಎಂ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಯೋಧರನ್ನು ಗೌರವಿಸಿದರು.
ಕಾರ್ಯಕ್ರಮದಲ್ಲಿ ಹಲವು ಯೋಧರು ಹಾಗೂ ಅವರ ಕುಟುಂಬದವರು, ಕಾಂಗ್ರೆಸ್ ಶಾಸಕರು, ಸಚಿವರು, ಸಂಸದರು ಪಾಲ್ಗೊಂಡಿದ್ದರು.
ʼಡೆವಿಲ್ʼ ಶೂಟಿಂಗ್‌ಗಾಗಿ ವಿದೇಶಕ್ಕೆ ಹಾರ್ತಾರಾ ದರ್ಶನ್..ದಾಸ ಫಾರಿನ್ ಟ್ರಿಪ್‌ಗೆ ಕೋರ್ಟ್‌ನಿಂದ ಸಿಗುತ್ತಾ ಅನುಮತಿ?