‘ಆಪರೇಷನ್ ಸಿಂಧೂರ’: ಚಿತ್ರದುರ್ಗದಲ್ಲಿ ಹಿಂದೂಪರ ಸಂಘಟನೆಗಳಿಂದ ಸಂಭ್ರಮಾಚರಣೆ
ಚಿತ್ರದುರ್ಗ: ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆ ಮೇಲೆ ದಾಳಿ ನಡೆಸಿ ಮಟಾಶ್ ಮಾಡಿದ ಹಿನ್ನೆಲೆಯ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಚಿತ್ರದುರ್ಗ ನಗರದ ಓಬವ್ವ ವೃತ್ತದಲ್ಲಿ ಜಮಾಯಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಜಗಘೋಷ ಮೊಳಗಿಸಿದ್ರು.
ಭಾರತ ದೇಶದ ಬಾವುಟ ಹಿಡಿದು ಪಟಾಕಿ ಸಿಡಿಸಿ ಭಾರತ್ ಮಾತಾಕಿ ಜೈ, ಜಮ್ಮ ಕಾಶ್ಮೀರ ನಮ್ಮದು ಎಂದು ಘೋಷಣೆ ಕೂಗಿದರು. ಇದೇ ವೇಳೆ ಪಾಕಿಸ್ತಾನಕ್ಕೆ ಬೆಂಬಲಿಸುವ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.
ಪಾಕ್ ವಾಯು ದಾಳಿ ಮಾಡಿ ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೈನ್ಯದ ಕಾರ್ಯಾಚರಣೆಗೆ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡ ಸೇನೆ: ಸಚಿವ ಎಚ್ ಕೆ ಪಾಟೀಲ್ ಹೇಳಿದ್ದೇನು..?
ಉಗ್ರರ ದಾಳಿಗೆ 26 ಮಂದಿ ಭಾರತೀಯರು ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೈನ್ಯದಿಂದ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿ ಪಾಕ್ ನ ಉಗ್ರರ ನೆಲೆಗಳನ್ನು ಭಾರತೀಯ ಸೈನ್ಯ ವಾಯು ದಾಳಿ ಧ್ವಂಸಗೊಳಿಸಿದೆ.