ಬೆಂಗಳೂರು: ಪಾಕಿಸ್ತಾನದ 9 ನೆಲೆಗಳನ್ನ ಟಾರ್ಗೆಟ್ ಮಾಡಿ 90ಕ್ಕೂ ಹೆಚ್ಚು ಉಗ್ರರನ್ನ ಭಾರತೀಯ ಸೇನೆ ಉಡಾಯಿಸಿದೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಯಶಸ್ವಿ ಕಾರ್ಯಾಚರಣೆ ಮಾಡಿರುವ ಭಾರತೀಯ ಸೇನೆಗೆ ಇಡೀ ದೇಶದಾದ್ಯಂತ ಅಭಿನಂದಿಸಲಾಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಆದೇಶ ನೀಡಿದೆ.
ಅದರಂತೆ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ.
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.
ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.
ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಇಂತಹದೊಂದು ಸೂಚನೆ ನೀಡಿದ್ದು ಮೆಚ್ಚುಗೆಗೆ ಕಾರಣವಾಗಿದೆ.