ನವದೆಹಲಿ:- ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ ಎಂದು ರಾಜನಾಥ್ ಸಿಂಗ್ ಅವರು ಮಹತ್ವದ ಸುಳಿವು ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 25 ನಿಮಿಷದ ಪ್ರತೀಕಾರದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನ ಉಗ್ರರ ನೆಲೆಗಳು ಉಡೀಸ್ ಆಗಿದ್ದು, ಆಪರೇಷನ್ ಸಿಂಧೂರ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ಬುಡಕ್ಕೆ ಬೆಂಕಿ ಹಚ್ಚಿ ಬಿಸಿ ಮುಟ್ಟಿಸಿದೆ. ಇದರ ಬೆನ್ನಲ್ಲೇ ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರೋ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ. ಪಿಕ್ಚರ್ ಅಭಿ ಬಾಕಿ ಹೇ ಎಂದರು.