Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮುಂದಿನ ದಿನಗಳಲ್ಲಿ ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು: ಸಿಎಂ ಸಿದ್ದರಾಮಯ್ಯ ಭರವಸೆ

    By Author AINMay 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!

    ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು

    ಮದ್ಯವರ್ತಿಗಳ ಹಾವಳಿಯಿಂದ ಪೌರಕಾರ್ಮಿಕರು ಮುಕ್ತ
    ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಯಿತು ಎಂದರು.

    ಪೌರಕಾರ್ಮಿಕರ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ

    ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರ್ಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪೌರ ಕಾರ್ಮಿಕರ ಈ ಬೇಡಿಕೆಯನ್ನು ಪೂರೈಸುವುದಾಗಿ ನೀಡಲಾಗಿದ್ದ ಭರವಸೆಯನ್ನು ಇಂದು ಈಡೇರಿಸಲಾಗಿದೆ. ಇದರಿಂದ 4ನೇ ದರ್ಜೆಯ ಪೌರಕಾರ್ಮಿಕನ ವೇತನ , ಅವರ ಖಾತೆಗೆ ನೇರವಾಗಿ 39000 ರೂ.ಗಳು ಪಾವತಿಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

    ಕಾಯಕದಲ್ಲಿ ಮೇಲು-ಕೀಳು ಇಲ್ಲ
    ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮಾಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದರು.

    ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು

    1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು , ಅವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರ್ಕಾರದ್ದಾಗಿದೆ. ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು.

    ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    National Doctors Day.. ಇಂದು ರಾಷ್ಟ್ರೀಯ ವೈದ್ಯರ ದಿನ: ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

    July 1, 2025

    Heart Attack Symptoms: ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಂಡು ಬರುತ್ತವೆ..! ನಿರ್ಲಕ್ಷಿಸಬೇಡಿ

    July 1, 2025

    Commercial Cylinder Price: ಗ್ರಾಹಕರಿಗೆ ಸಿಹಿ ಸುದ್ದಿ: ಸಿಲಿಂಡರ್ ಬೆಲೆಯಲ್ಲಿ ಇಳಿಕೆ..!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.