Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    By Author AINJune 17, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ನ್ನು ಉದ್ಘಾಟಿಸಿ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

    Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!

    ಪರಿಸರವನ್ನು ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದರು.

    ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ

    ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

    ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ
    ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

    ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು
    ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

    ಪ್ಲಾಸ್ಟಿಕ್ ಗೆ ಪರ್ಯಾಯ
    ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು ಎಂದರು.

    ಗಿಡ ಮರಗಳನ್ನು ನೆಟ್ಟು ಬೆಳೆಸೋಣ
    ಪುನರ್ಬಳಕೆ ಮತ್ತು ಮರುಬಳಕೆ ಪ್ರೋತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ, ಸಾರ್ವಜನಿಕ ಸಾರಿಗೆ ಉಪಯೋಗಿಸೋಣ, ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ, ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ , ನೀರನ್ನು ಪೋಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಪ್ರತಿಯೊಬ್ಬರೂ ಕರ್ತವ್ಯ ಎಂದು ಅರಿತು ‘ನನ್ನ ಜೀವ ನನ್ನ ಮರ ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ’ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

    ಪರಿಸರ ನ್ಯಾಯ, ಸುಸ್ಥಿರ ಬದ್ಧತೆಗೆ ಸಂಪೂರ್ಣ ಒಪ್ಪಿಗೆ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಚಿವರಾದ ಬೈರತಿ ಸುರೇಶ್, ಡಾ; ಕೆ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: ಡಿ.ಕೆ.ಶಿವಕುಮಾರ್

    June 17, 2025

    ಗೋಲ್ಡ್ ವಂಚನೆ ಪ್ರಕರಣ: ಡಿ.ಕೆ ಸುರೇಶ್’ಗೆ ಇಡಿ ಸಮನ್ಸ್!

    June 17, 2025

    2028ಕ್ಕೆ ನಾವೇ.. ನಮ್ಮದೇ ಸರ್ಕಾರ: ಬಿಜೆಪಿ ಪ್ರತಿಭಟನೆಗೆ ಡಿಕೆಶಿ ತಿರುಗೇಟು

    June 17, 2025

    ಸರ್ಕಾರದ ವಿರುದ್ಧ BJP ಪ್ರತಿಭಟನೆ: ವಿಮಾನ ದುರಂತಕ್ಕೆ ನಾವು ರಾಜೀನಾಮೆ ಕೇಳಿದ್ವಾ? ಸಿಎಂ ಸಿದ್ದರಾಮಯ್ಯ ಆಕ್ರೋಶ

    June 17, 2025

    ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಸಿನಿಮಾಗೆ ರಿಲೀಫ್:‌ ಸುಪ್ರೀಂಕೋರ್ಟ್‌ ಹೇಳಿದ್ದೇನು?

    June 17, 2025

    Crude Oil Price: ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ಏರಿಕೆ..! ಭಾರತೀಯ ಕಂಪನಿಗಳ ಮೇಲೆ ಒತ್ತಡ

    June 17, 2025

    Bengaluru: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್..!

    June 17, 2025

    ದೇಶದಲ್ಲಿ ಕೊರೋನಾ ಆತಂಕ: ಯಾವ ರಾಜ್ಯದಲ್ಲಿ ಅತಿ ಹೆಚ್ಚು ಕೇಸ್.? ಬೆಂಗಳೂರಲ್ಲಿ ಎಷ್ಟು.?

    June 17, 2025

    ಮದುವೆಗೆ ಹೋಗಿದ್ದವರ ಮನೆ ಗೂಡಿಸಿ ಗುಂಡಾಂತರ ಮಾಡಿದ್ದ ಆರೋಪಿಗಳು ಅರೆಸ್ಟ್..!

    June 17, 2025

    ಪ್ರಸಾರವಾಗಲಿಲ್ಲ ʼಕರ್ಣʼ ಸೀರಿಯಲ್..ಕೊನೆ ಕ್ಷಣದಲ್ಲಿ ಏನಾಯ್ತು..ಕಿರಣ್ ರಾಜ್ ಹೇಳಿದ್ದೇನು?

    June 17, 2025

    DK Shivakumar Fall Down: ಸೈಕಲ್ ಏರಿ ಜಾರಿ ಬಿದ್ದ ಡಿಕೆಶಿ..! ವಿಡಿಯೋ ವೈರಲ್

    June 17, 2025

    Gold Price: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ! ಬಂಗಾರ ಖರೀದಿಸಲು ಇದೇ ಬೆಸ್ಟ್ ಟೈಮ್

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.