ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥಾಪನೆಗೆ ಮುಂದಾಗಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್. ಎಂ ವಿಶ್ವೇಶ್ವರಯ್ಯ, ಮೆಜೆಸ್ಟಿಕ್, ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿ ನಿಲ್ದಾಣಗಳಲ್ಲಿ ಕಿಯೋಸ್ಕ್ ಮಳಿಗೆ ಸ್ಥಾಪಿಸಲು ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಬಿಎಂಆರ್ಸಿಎಲ್ ತನ್ನ ಹೌಸ್ ಜರ್ನಲ್ನಲ್ಲಿ ಉಲ್ಲೇಖಿಸಿದ್ದು.
ಹಳೆಯ ಬಟ್ಟೆ ಎಸೆಯೋದು ಅಥವಾ ದಾನ ಮಾಡೋದು.. ಇದರಲ್ಲಿ ಯಾವುದು ಒಳ್ಳೆಯದು?
ಬಿಎಂಆರ್ಸಿಎಲ್ ಈ ನಡೆ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ರಾಜ್ಯದ ಪ್ರತಿಷ್ಠಿತ ನಂದಿನ ಬ್ರ್ಯಾಂಡ್ ಬಿಟ್ಟು ಹೊರ ರಾಜ್ಯದ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆ ಪ್ರಾರಂಭವಾಗಿರುವುದಕ್ಕೆ ಜಾತ್ಯಾತೀತ ಜನತಾದಳ ವಿರೋಧ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗೆ ಅವಕಾಶ ನೀಡಲಾಗಿದೆ. ನಮ್ಮ ರೈತರ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ನಂದಿನಿ ಬ್ರಾಂಡ್ ಅನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ನಂದಿನಿಯನ್ನು ಮರೆತು,
ಹೊರ ರಾಜ್ಯಗಳ ಹಾಲಿನ ಉತ್ಪನ್ನಗಳಿಗೆ ರತ್ನ ಕಂಬಳಿ ಹಾಸಿದೆ. ನಂದಿನಿ ಹಾಲಿನ ಉತ್ಪನ್ನಗಳಿಗೆ ಸ್ಪರ್ಧಾತ್ಮಕವಾಗಿ ಮಾರುಕಟ್ಟೆ ಸೃಷ್ಟಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ಕನ್ನಡಿಗರ ಹೆಮ್ಮೆಯ ಬ್ರಾಂಡ್ “ನಂದಿನಿ”ಯ ಹಿತಾಸಕ್ತಿಗೆ ಧಕ್ಕೆ ತರುತ್ತಿದೆ ಎಂದು ಕಿಡಿಕಾರಿದೆ.