ಕೂಡ್ಲಿಗಿ : ಲಾರಿಯೊಂದು ಚಲಿಸುತ್ತಿರುವಾಗಲೇ ಏಕಾಏಕಿ ಧರೆಗೆ ಉರುಳಿದೆ. ಈ ವೇಳೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಧಗ, ಧಗನೆ ಹೊತ್ತಿ ಉರಿದಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಾಲೂಕಿನ ಶಿವಪುರ ಗ್ರಾಮದಲ್ಲಿ ಘಟನೆ. ಬೆಂಕಿ ಹೊತ್ತಿ ಉರಿದ ಲಾರಿ ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗದತ್ತ ಚಲಿಸುತ್ತಿರುವಾಗ ಈ ದುರ್ಘಟನೆ ನಡೆದಿದೆ.
ರಾಹುಲ್ ಗಾಂಧಿ, ನೀವು ಪಶ್ಚಾತ್ತಾಪ ಯಾತ್ರೆ ಮಾಡುವ ದಿನ ದೂರ ಇಲ್ಲ: ನಿಖಿಲ್ ಕುಮಾರಸ್ವಾಮಿ!
ಶೇಂಗಾ ಹೊತ್ತು ಹೊರಟಿದ್ದ ಲಾರಿ, ಏಕಾ, ಏಕಿ ಪಲ್ಟಿಯಾಗಿದೆ. ರಸ್ತೆಗೆ ಲಾರಿ ಬೀಳ್ತಿದ್ದಂತೆ ಡೀಸೆಲ್ ಟ್ಯಾಂಕ್ ಒಡೆದಿದೆ. ಬಳಿಕ ಬೆಂಕಿಯ ಕಿಡಿ ಹೊತ್ತಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮ ಆಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.