ಕೋಲ್ಕತ್ತಾ:– ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ತ್ಯಜಿಸಲು ನಿರ್ಧರಿಸಿದ್ದಾರೆ. ಸಬೀರ್ ಹುಸೇನ್ ಇಸ್ಲಾಂ ತೊರೆಯಲು ನಿರ್ಧರಿಸಿರುವ ಶಿಕ್ಷಕ.
ಫುಡ್ ಕಿಟ್ನಲ್ಲಿ ಡ್ರಗ್ಸ್ ಸಾಗಾಟ: ವಿದೇಶಿ ಮಹಿಳೆ ಅರೆಸ್ಟ್, 8.5 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್!
ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗಾಗಿ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯೆಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.