ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಇನ್ನೂ ದಾಳಿ ನಡೆಸಿದ ಐವರ ಪೈಕಿ ಓರ್ವ ಉಗ್ರನ ಫೋಟೋ ಹೊರಬಂದಿದೆ. ಪ್ರವಾಸಿಗರೊಬ್ಬರು AK 47 ಗನ್ ಹಿಡಿದ ಉಗ್ರನ ಫೋಟೋವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದು, ಸದ್ಯ ಬೆಳಕಿಗೆ ಬಂದಿದೆ. ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ನಡೆದ ದಾಳಿಯಲ್ಲಿ 26 ಪ್ರವಾಸಿಗರು ಮೃತರಾಗಿದ್ದಾರೆ.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್–ಎ–ತೊಯ್ಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ದಾಳಿಕೋರರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ಮುಂದಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿರುವ ಪ್ರವಾಸಿಗರ ಸ್ಥಳಾಂತರಕ್ಕೆ ಹೆಚ್ಚುವರಿ ವಿಮಾನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.