ಕೋಲಾರ – ಪಹಲ್ಗಾಮ್ ಉಗ್ರರ ದಾಳಿಯನ್ನು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕೋಲಾರದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಲಾರದ ಕುಂಬಾರ ಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬಾತ ವಿಡಿಯೋ ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದ.
India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!
ಈ ಸಂಬಂಧ ಕೋಲಾರದ ಗಲ್ ಪೇಟೆ ಠಾಣೆ ಪೊಲೀಸರು ಮುನೀರ್ ಖಾನ್ ಖುರೇಷಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಹಿಂದೂ ಮತ ಕ್ರೋಡೀಕರಿಸಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎಂದು ಈತ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಸುಳ್ಳು ಸುದ್ದಿ ಹಬ್ಬಿಸಿದ್ದ. ಮುನೀರ್ ಖಾನ್, ಚಿಕನ್ ಅಂಗಡಿಯ ಮಾಲೀಕನಾಗಿದ್ದು, ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ್ದ ವಿಡಿಯೋದಲ್ಲಿ, ಪಹಲ್ಗಾಮ್ ದಾಳಿಯನ್ನು ಕೇಂದ್ರ ಸರ್ಕಾರದ ಪೂರ್ವ ಯೋಜಿತ ಕೃತ್ಯ. ಬಿಹಾರ ಚುನಾವಣೆಯಲ್ಲಿ ಹಿಂದೂಗಳ ಮತ ಗಳಿಸಲು ಈ ದಾಳಿ ನಡೆಸಲಾಗಿದೆ ಎಂದು ಹೇಳಿದ್ದ. ಈ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲ, ಅಶಾಂತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದ್ದ ಕಾರಣ, ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೋಮು ಗಲಭೆ ತಡೆಗಟ್ಟಲು ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.