ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ನರಮೇಧದ ವಿರುದ್ಧ ಇಡೀ ದೇಶ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಹೇಯ ಕೃತ್ಯದ ಬೆನ್ನಲ್ಲೆ ಪಾಕಿಸ್ತಾನಿ ನಟ ಫವಾದ್ ಖಾನ್ ಬಾಲಿವುಡ್ ನಟಿ ವಾಣಿ ಕಪೂರ್ ನಟನೆಯ ಅಬಿರ್ ಗುಲಾಲ್ ಸಿನಿಮಾವನ್ನು ಭಾರತದಲ್ಲಿ ನಿಷೇಧಿಸಬೇಕೆಂಬ ಬೇಡಿಕೆಗಳು ಹೆಚ್ಚುತ್ತಿವೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.
ಆರತಿ ಎಸ್ ಬಾಗ್ಡಿ ನಿರ್ದೇಶನದ ಅಬಿರ್ ಗುಲಾಲ್ ಸಿನಿಮಾ ಚಿತ್ರ ಮೇ 9 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ನಡುವೆ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಿಂದ , 26 ಜನರು ಮೃತಪಟ್ಟಿದ್ದಾರೆ. ಹೀಗಾಗಿ “ಅಬೀರ್ ಗುಲಾಲ್” ಚಿತ್ರವನ್ನು ಭಾರತದ ಯಾವುದೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅನುಮತಿಸಲಾಗುವುದಿಲ್ಲ” ಎಂದು ಎಕ್ಸ್‌ನಲ್ಲಿ ಚರ್ಚೆ ಶುರುವಾಗಿದೆ.
ಮತ್ತೊಬ್ಬರು, “ಪಾಕಿಸ್ತಾನಿ ನಟರನ್ನು ಇಟ್ಟುಕೊಂಡು ಭಾರತದಲ್ಲಿ ಅಬೀರ್ ಗುಲಾಲ್ ನಂತಹ ಚಲನಚಿತ್ರಗಳನ್ನು ನಿರ್ಮಿಸಲು ನಾವು ಇನ್ನೂ ಅವಕಾಶ ನೀಡುತ್ತೇವೆಯೇ?” ಎಂದು ಟ್ವೀಟ್ ಮಾಡಿದ್ದಾರೆ.