ಕೋಲಾರ:- ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯನ್ನು ಖಂಡಿಸುತ್ತೇನೆ. ನರಮೇಧ ನಡೆಸಿದ ಇಂತಹ ಉಗ್ರರನ್ನು ಬಗ್ಗು ಬಡಿಯಬೇಕು ಎಂದರು.
ಇದರಲ್ಲಿ ದೇಶದ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ, ಬೇಹುಗಾರಿಕೆ ಸಂಪೂರ್ಣ ವಿಫಲವಾಗಿದೆ. ಗೃಹ ಸಚಿವ ಅಮಿಶ್ ಶಾ ಅವರ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅವರು ಹಿಂದೂಗಳನ್ನು ಟಾರ್ಗೆಟ್ ಮಾಡಿದ್ದಾರೆ ಅನ್ನೋದು ಇಲ್ಲ. ಇದರಲ್ಲಿ ಧರ್ಮ ಅನ್ನೋದಕ್ಕಿಂತ ಎಲ್ಲರದ್ದು ಜೀವ ಅಲ್ವಾ ಎಂದು ಪ್ರಶ್ನಿಸಿದರು.
ಗೃಹ ಇಲಾಖೆ ವಿಫಲವಾಗಿದೆ. ಹಾಗಾಗಿ ಇಂದಿರಾಗಾಂಧಿ, ನೆಹರು ಕಾಲದಲ್ಲಿ ದೇಶವನ್ನ ರಕ್ಷಣೆ ಮಾಡಿದಂತೆ ಸದ್ಯ ಈಗಲೂ ಕೇಂದ್ರ ಸರ್ಕಾರ ಎಚ್ವೆತ್ತುಕೊಂಡು ಇಂತಹದಕ್ಕೆ ಕಡಿವಾಣ ಹಾಕಬೇಕಿದೆ ಎಂದು ತಿಳಿಸಿದರು.