ಪಾಕಿಸ್ತಾನ್: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬೆನ್ನಲ್ಲೇ ರಾಜ್ಯ ಪ್ರವಾಸಿ ತಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಭಾರತ, ಪಾಕಿಸ್ತಾನ ಸರ್ಕಾರದ ಎಕ್ಸ್ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ.
ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?
ಬುಧವಾರ ನಡೆದ ಸಿಸಿಎಸ್ ಸಭೆಯಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ, ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಇದಾದ ಬಳಿಕ ಈಗ ಪಾಕ್ ಸರ್ಕಾರದ ಎಕ್ಸ್ ಖಾತೆಯನ್ನು ಭಾರತ ಸ್ಥಗಿತಗೊಳಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಇದರ ಅಡಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಸೂಚಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ನ್ನು (Attari Border) ತಕ್ಷಣದಿಂದ ಮುಚ್ಚಲು ಆದೇಶಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ತಿಳಿಸಿದ್ದರು. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ತ್ಯಜಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳ್ಳುತ್ತದೆ ಎಂದು ಮಿಶ್ರಿ ಹೇಳಿದ್ದರು.