ಭಾರತ ಮತ್ತು ಪಾಕಿಸ್ತಾನದ ನಡುವೆ ಕದನವಿರಾಮ ಘೋಷಿಸಲಾಗಿತ್ತು. ಆದರೆ, ಆ ಒಪ್ಪಂದವನ್ನು ಒಂದು ದಿನವೂ ಉಳಿಸಿಕೊಳ್ಳಲು ಯೋಗ್ಯತೆಯಿಲ್ಲದ ಪಾಕಿಸ್ತಾನ ರಾತ್ರಿಯೇ ಜಮ್ಮುವಿನಲ್ಲಿ ಡ್ರೋನ್ ಮತ್ತು ಶೆಲ್ ದಾಳಿ ನಡೆಸಿತ್ತು. ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು,
ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು. ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ. ಆದರೂ ಪಾಕಿಸ್ತಾನ ತನ್ನ ವರಸೆಯನ್ನು ಬಿಡದೆ ಭಾರತದ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ.
Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ನಂತರ, ರಾಂಬನ್‌ನಲ್ಲಿರುವ ಬಾಗ್ಲಿಹಾರ್ ಅಣೆಕಟ್ಟನ್ನು ತೆರೆಯಲಾಗಿದೆ. ಇದಲ್ಲದೆ, ರಿಯಾಸಿಯ ಸಲಾಲ್ ಅಣೆಕಟ್ಟಿನ ದ್ವಾರಗಳನ್ನು ಸಹ ತೆರೆಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಖಂಡಿತವಾಗಿಯೂ ಕದನ ವಿರಾಮವಿದೆ. ಆದರೆ ಭದ್ರತಾ ಸಂಸ್ಥೆಗಳು ಇನ್ನೂ ಸಂಪೂರ್ಣವಾಗಿ ಜಾಗರೂಕವಾಗಿವೆ. ಎಸ್ಐಎ ಕುಲ್ಗಾಮ್‌ನ ಹಲವಾರು ಸ್ಥಳಗಳ ಮೇಲೆ ದಾಳಿ ಮಾಡಿದೆ.