ಹುಬ್ಬಳ್ಳಿ; ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲು, ಮೊಸರಿನ ದರ ಏರಿಕೆ ದೊಡ್ಡ ಹೊರೆಯಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ದರ ಹೆಚ್ಚಳವಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ದರ ಏರಿಕೆ ಮಾಡಿದ್ದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಹಾಗೇ ಮದ್ಯದ ದರ ಏರಿಕೆ. ಹೀಗೆ ಸಾಲು ಸಾಲು ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಹಾಲು ಹಾಗೂ ಮೋಸರು ದರ ಏರಿಕೆ ಬಿಸಿ ಮುಟ್ಟಿದ್ದು ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆ ಸರಕಾರದ ವಿರುದ್ಧ ಕಿಡಿ ಕಾರತಾ ಇದ್ದಾರೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೂಡ ವಿದ್ಯುತ್ ಶಾಕ್ ಕೊಟ್ಟಿದ್ದು ಶಾಕ್ ಆಗಿದೆ .ಒಂದು ಕಡೆ ಒಂದೊಂದಾಗಿ ದರ ಏರಿಕೆ ಮಾಡಿ ಬಡವರ ,ಜನಸಾಮಾನ್ಯರ ಹಾಗೂ ಅನ್ನದಾತರನ್ನಬೀದಿಗೆ ತಳ್ಳಿದೆ.ಕೂಡಲೇ ಸರಕಾರ ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸತಾ ಇದೆ ಎಂದು ರತ್ನ ಭಾರತ ರೈತ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡರ ಬಸನಗೌಡರ ಕಿಡಿ ಕಾರಿದರು.
Electricity Bill: ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್: ಹಾಲಿನ ದರ ಬೆನ್ನಲ್ಲೇ ವಿದ್ಯುತ್ ದರ ಏರಿಕೆ..!
ಒಂದು ವೇಳೆ ಗ್ರಾಹಕರ ಮೇಲೆ ಹೊರೆ ಹೊರಿಸುವುದು ಅನಿವಾರ್ಯವಾದರೆ ಹೆಚ್ಚಳ ಮಾಡಿರುವ ₹4 ನೇರವಾಗಿ ಹಾಲು ಉತ್ಪಾದಕರ ಕೈ ಸೇರುವಂತೆ ನೋಡಿಕೊಳ್ಳಿ. ಆಡಳಿತ ವೆಚ್ಚ, ಮತ್ತೊಂದು ವೆಚ್ಚ ಎಂದು ಅತ್ತ ರೈತರಿಗೂ ಲಾಭವಿಲ್ಲದೆ ಇತ್ತ ಗ್ರಾಹಕರ ಜೇಬಿಗೂ ಕತ್ತರಿ ಹಾಕಿದರೆ ಸರ್ಕಾರದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಮಿಣಜಗಿ ಅವರು ಎಚ್ಚರಿಕೆ ನೀಡಿದ್ದಾರೆ.