ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ್ ಅವರು ಚುನಾವಣಾ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅವರು, ಜನರೆತೆ ಹಲವಾರು ಗ್ಯಾರಂಟಿಗಳ ಆಮಿಷವನ್ನು ಒಡ್ಡುವ ಮೂಲಕ ಸಿದ್ದರಾಮಯ್ಯನವರು 2023ರ ಚುನಾವಣೆಯಲ್ಲಿ ಗೆದ್ದಿದ್ದಾರೆ.
ನೀವು ಯಾವಾಗಲೂ ಯಂಗ್ ಆಗಿ ಕಾಣಿಸ್ಬೇಕಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾದದ್ದು. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಅವರು ಮನವಿಯಲ್ಲಿ ನ್ಯಾಯಾಲಯವನ್ನು ಕೇಳಿಕೊಂಡಿದ್ದರು.
ಅರ್ಜಿಯನ್ನು ಸ್ವೀಕರಿಸಿದ್ದ ನ್ಯಾಯಾಲಯದ ಸಿದ್ದರಾಮಯ್ಯನವರಿಗೆ ಈ ಬಗ್ಗೆ ತಮ್ಮ ವಾದ ಮಂಡಿಸಲು ಅವಕಾಶ ಕಲ್ಪಿಸಿತ್ತು. ಅದರಂತೆ, ಹಿರಿಯ ವಕೀಲರಾದ ಪ್ರೊ. ರವಿವರ್ಮ ಕುಮಾರ್ ಅವರ ಮೂಲಕ ತಮ್ಮ ತಕರಾರು ಸಲ್ಲಿಸಿದ್ದ ಸಿದ್ದರಾಮಯ್ಯನವರು,
ಚುನಾವಣಾ ಪೂರ್ವದಲ್ಲಿ ರಾಜಕೀಯ ಪಕ್ಷಗಳಿಂದ ಆಶ್ವಾಸನೆಗಳನ್ನು ನೀಡುವುದಕ್ಕೆ ಅವಕಾಶವಿದೆ ಎಂದು ವಾದ ಮಂಡಿಸಿದ್ದರು. ವಾದ – ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ, ಶಂಕರ್ ಅವರ ಅರ್ಜಿಯನ್ನು ವಜಾಗೊಳಿಸಿತು.