ಜೂನಿಯರ್ ಎನ್‌ಟಿಆರ್ ಪ್ರಶಾಂತ್ ನೀಲ್ ಅಂತೂ ಇಂತೂ ತಮ್ಮ ಬಹುನಿರೀಕ್ಷಿತ ಸಿನಿಮಾದ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಕೊಡೋದಿಕ್ಕೆ ಸಜ್ಜಾಗಿದ್ದಾರೆ. ನಾಳೆಯಿಂದ ನೀಲ್-ಎನ್ ಟಿಆರ್ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಈ ಮಾಸ್ ಜೋಡಿ ಸಮುದ್ರ ತಟದಲ್ಲಿ ನಿಂತು ಗಹನ ಚರ್ಚೆಗಳಿದಿರುವ ಫೋಟೋವೊಂದು ವೈರಲ್ ಆಗುತ್ತಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಈ ಚಿತ್ರಕ್ಕಾಗಿ ಮಂಗಳೂರಿನಲ್ಲಿ ಅದ್ಧೂರಿ ಸೆಟ್ ಹಾಕಲಾಗಿದ್ದು, ಹೈವೋಲ್ಟೇಜ್ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತದೆಯಂತೆ.
ದೇವರ ಬಳಿಕ ತಾರಕ್ ನೀಲ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇತ್ತ ಪ್ರಭಾಸ್ ಗೆ ಸಲಾರ್ ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್ ನೀಲ್ ಎನ್ ಟಿಆರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಚಿತ್ರಕ್ಕೆ ತಾತ್ಕಲಿಕವಾಗಿ #NTRNeel ಎಂಬ ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್‌ಟಿಆರ್ ಅವರ ಲುಕ್ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ.
ಮೈತ್ರಿ ಮೂವೀ ಮೇಕರ್ಸ್ ಈ ಮೆಗಾ ಪ್ರಾಜೆಕ್ಟ್ ಗೆ ಹಣ ಹಾಕುತ್ತಿದೆ. ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಾಣವಾಗುತ್ತಿದ್ದು, ಸಿನಿಮಾಗೆ ಡ್ರಾಗ್ಯನ್ ಎಂಬ ಟೈಟಲ್ ಇಡಲಾಗಿದೆ ಎಂಬ ಮಾಹಿತಿ ಇದೆ. ಆದ್ರೆ ಚಿತ್ರತಂಡ ಈ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ.