ಬೆಂಗಳೂರು: ಗುಜರಾತ್ನ ಅಹ್ಮದಾಬಾದ್ನಲ್ಲಿ ವಿಮಾನ ಪತನಗೊಂಡಿದೆ. ಅಹ್ಮದಾಬಾದ್ ಏರ್ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ. ಇನ್ನೂ ಈ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಗುಜರಾತ್ ರಾಜ್ಯದ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.