ಅಹಮ್ಮದಾಬಾದ್:- ಅಹಮ್ಮದಾಬಾದ್ ನಲ್ಲಿ ಇಂದು ಸಂಭವಿಸಿದ್ದ ವಿಮಾನ ದುರಂತದಲ್ಲಿ 241 ಜನ ಸಾವನ್ನಪ್ಪಿದ್ದರೆ, ಓರ್ವ ವ್ಯಕ್ತಿ ಪವಾಡದ ರೀತಿ ಪಾರಾಾಗಿದ್ದಾನೆ. ಗುಜರಾತ್ನ ಏರ್ ಇಂಡಿಯಾ ವಿಮಾನ ಪತನವಾದ ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಆದರೆ ಪವಾಡಸದೃಶವಾಗಿ ಒಬ್ಬ ವ್ಯಕ್ತಿ ವಿಮಾನದಿಂದ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್!
ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ವಿಶ್ವಾಸ್ ಕುಮಾರ್ ರಮೇಶ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ವಿಮಾನ ನಿಲ್ದಾಣದ ಟೇಕಾಫ್ ಆದ 30 ಸೆಕೆಂಡ್‌ಗಳ ನಂತರ ದೊಡ್ಡ ಶಬ್ಧ ಕೇಳಿ ಬಂತು ನಂತರ ವಿಮಾನ ಪತನ ಹೊಂದಿತು ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಪಾರಾದ ವಿಶ್ವಾಸ್ ಅವರು ತುರ್ತು ನಿರ್ಗಮನ ಡೋರ್ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದರು. ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಅವರು ಹಾರಿದ್ದರಿಂದ ಪಾರಾಗಿದ್ದಾರೆ.
ವಿಶ್ವಾಸ್ ಅವರ ಎದೆ , ಕಣ್ಣು, ಪಾದಗಳು ಗಾಯಗೊಂಡಿದ್ದು ಅವರು ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನ ಪತನಗೊಂಡ ಸ್ಥಳದಿಂದ ಅವರು ನಡೆದುಕೊಂಡೇ ಅಂಬುಲೆನ್ಸ್ ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.