Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಂಗಡಿಗಳಿಗೆ ಅಪ್ಪಳಿಸಿದ ವಿಮಾನ: 10 ಪ್ರಯಾಣಿಕರು ಸಾವು

    By Author AINDecember 23, 2024
    Share
    Facebook Twitter LinkedIn Pinterest Email
    Demo

    ಬ್ರೆಜಿಲ್: ದಕ್ಷಿಣ ಬ್ರೆಜಿಲ್‌ನ ಪ್ರವಾಸಿ ನಗರವಾದ ಗ್ರಾಮಡೊದಲ್ಲಿ 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಂಗಡಿಗಳಿಗೆ ಅಪ್ಪಳಿಸಿದ್ದು, ಎಲ್ಲಾ 10 ಪ್ರಯಾಣಿಕರು ಮೃತಪಟ್ಟಿದ್ದಾರೆ. ವಿಮಾನ ಪತನದ ಬಳಿಕ ಹೊತ್ತಿಕೊಂಡ ಬೆಂಕಿಯಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ನಿಯಂತ್ರಣ ಕಳೆದುಕೊಂಡ ವಿಮಾನವು ಹಲವಾರು ಕಟ್ಟಡಗಳಿಗೆ ಡಿಕ್ಕಿ ಹೊಡೆದು ವ್ಯಾಪಕ ಹಾನಿಯನ್ನುಂಟು ಮಾಡಿದೆ. ಈ ಘಟನೆಯಲ್ಲಿ 12 ಜನರು ಗಾಯಗೊಂಡಿದ್ದಾರೆ ಎಂದು ಬ್ರೆಜಿಲಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಘರ್ಷಣೆಯಿಂದ ಉಂಟಾದ ಬೆಂಕಿಯಿಂದಾಗಿ ಅನೇಕರು ಉಸಿರಾಟದ ಸಮಸ್ಯೆಯಿಂದ ಬಳಲಿದರು ಎಂದು ವರದಿಯಾಗಿದೆ. ವಿಮಾನ ಕಟ್ಟಡಗಳಿಗೆ ಅಪ್ಪಳಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ, ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿಯಲ್ಲಿ ಉಲ್ಲೇಖಿಸಿವೆ.

    ವಿಮಾನವು ಸ್ಥಳೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತ ಸಂಭವಿಸಿದೆ ಎಂದು ರಾಷ್ಟ್ರೀಯ ಸಿವಿಲ್ ಡಿಫೆನ್ಸ್ ಹೇಳಿದೆ. ವಿಮಾನವು ವಸತಿ ಗೃಹಕ್ಕೆ ಅಪ್ಪಳಿಸುವ ಮೊದಲು ಕಟ್ಟಡದ ಚಿಮಣಿಗೆ ಡಿಕ್ಕಿ ಹೊಡೆದು ನಂತರ ಪೀಠೋಪಕರಣ ಅಂಗಡಿಗೆ ಅಪ್ಪಳಿಸಿತು. ಅಪಘಾತದ ಅವಶೇಷಗಳು ಸಹ ಹೋಟೆಲ್‌ ಅಪ್ಪಳಿಸಿವೆ ಎಂದು ಮಾಧ್ಯಮ ವರದಿ ಮಾಡಿದೆ. ವಿಮಾನದಲ್ಲಿ ಯಾರೂ ಬದುಕುಳಿದಿರುವ ಸಾಧ್ಯತೆಗಳಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ರಿಯೊ ಗ್ರಾಂಡೆ ಡೊ ಸುಲ್ ಗವರ್ನರ್ ಎಡ್ವರ್ಡೊ ಲೈಟ್ ಅವರು ವಿಮಾನದಲ್ಲಿದ್ದವರು ಯಾರು ಬದುಕಿ ಉಳಿದಿಲ್ಲ ಎಂದು ಹೇಳಿದ್ದಾರೆ. ಇನ್ನು ವಿಮಾನ 10 ಜನರನ್ನು ಹೊತ್ತೊಯ್ದಿದೆ ಎಂದು ಪ್ರಾಥಮಿಕ ಮಾಹಿತಿಗಳು ಹೇಳುತ್ತಿವೆ. ಮೃತಪಟ್ಟವರೆಲ್ಲ ವಿಮಾನದಲ್ಲಿದ್ದವರಾ, ಅಥವಾ ನೆಲದ ಮೇಲಿದ್ದವರಾ ಎಂಬುದು ಸ್ಪಷ್ಟವಾಗಿಲ್ಲ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

     

    Demo
    Share. Facebook Twitter LinkedIn Email WhatsApp

    Related Posts

    ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಗಂಭೀರ ಆರೋಪ ಮಾಡಿದ ಮಸ್ಕ್..! ಕಾರಣವೇನು ಗೊತ್ತಾ..?

    June 4, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!

    June 3, 2025

    ಪಾಕಿಸ್ತಾನದಲ್ಲಿ ಭೂಕಂಪ: ಜೈಲಿನ ಗೋಡೆ ಕುಸಿತ, 216 ಕೈದಿಗಳು ಪರಾರಿ

    June 3, 2025

    ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು: ಶೇಖ್ ಹಸೀನಾಗೆ ಮರಣದಂಡನೆ ಸಾಧ್ಯತೆ!

    June 2, 2025

    ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು?

    June 1, 2025

    Nigeria floods: ನೈಜೀರಿಯಾದಲ್ಲಿ ಪ್ರವಾಹ: 111 ಮಂದಿ ಸಾವು

    May 31, 2025

    Trump – Musk: ಸ್ನೇಹಕ್ಕೆ ಅಂತ್ಯ..! ಡೊನಾಲ್ಡ್ ಟ್ರಂಪ್ ಆಡಳಿತದಿಂದ ಹಿಂದೆ ಸರಿದ ಎಲೋನ್ ಮಸ್ಕ್

    May 30, 2025

    Vladimir Putin: ರಷ್ಯಾ ಅಧ್ಯಕ್ಷ ಪುಟಿನ್ ಹೆಲಿಕಾಪ್ಟರ್ ಮೇಲೆ ಡ್ರೋನ್ ದಾಳಿ ಮಾಡಿದ್ದು ನಿಜವೇ..?

    May 26, 2025

    ಯೂನಸ್ ಬಾಂಗ್ಲಾದೇಶವನ್ನು ಅಮೆರಿಕಕ್ಕೆ ಮಾರಾಟ ಮಾಡುತ್ತಿದ್ದಾರೆ: ಶೇಕ್ ಹಸೀನಾ ಆರೋಪ

    May 26, 2025

    ಡೊನಾಲ್ಡ್ ಟ್ರಂಪ್ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ ಸೈಬರ್ ಕಳ್ಳರು..!

    May 26, 2025

    ಪಾಕಿಸ್ತಾನಕ್ಕೆ ಶತಕೋಟಿ ಡಾಲರ್ ನೆರವನ್ನು ಸಮರ್ಥಿಸಿಕೊಂಡ IMF.!

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.