ಹುಬ್ಬಳ್ಳಿ: ಪಿಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಗರದ ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ನಡೆಸಲಾಯಿತು. ಪಿಎಂ ವಿಶ್ವಕರ್ಮ ಯೋಜನೆ ಭಾರತ ಸರ್ಕಾರದ ಒಂದು ಕೇಂದ್ರ ವಲಯ ಯೋಜನೆಯಾಗಿದ್ದು,
ಕೈಯಿಂದ ಮತ್ತು ಉಪಕರಣಗಳನ್ನು ಬಳಸಿ ಕೆಲಸ ಮಾಡುವ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲ ಕಲಾವಿದರಿಗೆ ಸರ್ವಾಂಗೀಣ ಬೆಂಬಲವನ್ನು ಒದಗಿಸಲು 2023ರ ಸೆಪ್ಟೆಂಬರ್ 17ರಂದು (ವಿಶ್ವಕರ್ಮ ಜಯಂತಿಯಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಚಾಲನೆಗೊಂಡಿತು.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ಈ ಯೋಜನೆಯು ಭಾರತದ ಸಾಂಪ್ರದಾಯಿಕ ಕರಕುಶಲತೆಯನ್ನು ಸಂರಕ್ಷಿಸುವುದರ ಜೊತೆಗೆ ಕುಶಲಕರ್ಮಿಗಳಿಗೆ ಆರ್ಥಿಕ ಸ್ವಾವಲಂಬನೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ದಿವ್ಯ ಪ್ರಭು,
ಡಿಐಸಿ ಜಂಟಿ ನಿರ್ದೇಶಕ ಸಂತೋಷ ಭಟ್, ಡಿಐಸಿ ಜಿಲ್ಲಾ ಅಧಿಕಾರಿ ಶಿವಾನಂದ ಕಮ್ಮಾರ, ಜಿಲ್ಲಾ ವ್ಯವಸ್ಥಾಪಕರು ಸಾಮಾನ್ಯ ಸೇವಾ ಕೇಂದ್ರ ಹಾಗೂ ರಾಷ್ಟ್ರೀಯ ಸ್ಟೀರಿಂಗ್ ಸಮಿತಿಯಿಂದ ನಾಮ ನಿರ್ದೇಶಿತ ಗೊಂಡ ಸದಸ್ಯರಾದ ಬಸವರಾಜ ಕುಂದಗೋಳಮಠ, ಸಂತೋಷ ಚವ್ಹಾಣ ಮತ್ತು ಶಿವು ಬೆಲಾರಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.