ಮಂಗಳೂರು:- ಮಂಗಳೂರಿನಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳನ್ನು ಭೇಟಿಮಾಡಿದ್ದೇವೆ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಬಳಿಕ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆ ಬಳಿಕ ಜಿಲ್ಲೆಯಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ, ಕಾಂಗ್ರೆಸ್ ಸರ್ಕಾರವೇ ಪೊಲೀಸರ ಮೂಲಕ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಹೇಳಿದರು.
ಪೊಲೀಸರು ವಿಹೆಚ್ಪಿ, ಬಜರಂಗ ದಳ, ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಮನೆಗಳಿಗೆ ಅಪರಾತ್ರಿಯಲ್ಲಿ ಹೋಗಿ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.