ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೊಲೀಸ್ ಪೇದೆ ಮೇಲೆ ಸೇನಾಧಿಕಾರಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
42 ವರ್ಷದ ಮಹಿಳಾ ಪೊಲೀಸ್ ಪೇದೆ ನೀಡಿದ ದೂರಿನ ಆಧಾರದ ಮೇಲೆ ಸೇನಾಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 69 (ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಭೋಗ) ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇನ್ನೂ ಈ ಕುರಿತು ಪ್ರತಿಕ್ರಿಯಿಸಿದ ಭೋಪಾಲ್ ಮಹಿಳಾ ಪೊಲೀಸ್ ಭದ್ರತಾ ಸಹಾಯಕ ಕಮಿಷನರ್ ನಿಧಿ ಸಕ್ಸೇನಾ, ಆರೋಪಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದು, ಆತ ಕರ್ತವ್ಯ ನಿರ್ವಹಿಸುತ್ತಿರುವ ಸೇನಾ ಘಟಕಕ್ಕೆ ಅತ್ಯಾಚಾರ ಕುರಿತು ಮಾಹಿತಿ ನೀಡಿದ್ದೇವೆ. ಅವರು ವಿಚಾರಣೆಗೆ ಬಂದರೆ ಒಳ್ಳೆಯದು , ಇಲ್ಲದಿದ್ದರೆ ಬಂಧನ ಕಾರ್ಯವಿಧಾನವನ್ನು ಅನುಸರಿಸಬೇಕಾಗುತ್ತದೆ ಎಂದರು.