ಬೆಂಗಳೂರು:- ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ ಎಂದು ಹೈಕೋರ್ಟ್ ಗೆ DNA ಮಾಹಿತಿ ನೀಡಿದ್ದಾರೆ. ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರವೇ ಆಯೋಜಿಸಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಆರ್ಸಿಬಿಯ ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್ಎ ಸಂಸ್ಥೆ ಹೈಕೋರ್ಟ್ಗೆ ಹೇಳಿದೆ.
ಮುಟ್ಟಿನ ಸಮಯದಲ್ಲಿ ಈ ಲಕ್ಷಣಗಳನ್ನು ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ! ಯಾಕೆ ಗೊತ್ತಾ!?
11 ಮಂದಿ ಕಾಲ್ತುಳಿತಕ್ಕೆ ಸಂಬಂಧಿಸಿದ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಆರ್ಸಿಬಿ ಮ್ಯಾನೇಜ್ಮೆಂಟ್ ಹಾಗೂ ಡಿಎನ್ಎ ಎಂಟರ್ಟೈನ್ಮೆಂಟ್ ಸಂಸ್ಥೆ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿವೆ. ಇದರಲ್ಲಿ ಸರ್ಕಾರದ ವಿರುದ್ಧವೇ ಗಂಭೀರ ಆರೋಪ ಮಾಡಲಾಗಿದೆ. ಕಾಲ್ತುಳಿತ ಸಂಭವಿಸಲು ಸರ್ಕಾರವೇ ಕಾರಣ ಎಂದು ನೇರವಾಗಿ ದೂರಲಾಗಿದೆ.
ವಿಧಾನಸೌಧ ಕಾರ್ಯಕ್ರಮಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಸ್ಟೇಡಿಯಂ ಬಳಿ ಅಗತ್ಯವಿದ್ದಷ್ಟು ಪೊಲೀಸರು ನಿಯೋಜನೆ ಮಾಡದ ಕಾರಣ ಡಿಎನ್ಎನಿಂದಲೇ 584 ಖಾಸಗಿ ಸಿಬ್ಬಂದಿ ನೇಮಕ ಮಾಡಲಾಗಿತ್ತು. ಸರ್ಕಾರ ತನ್ನ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಬಂಧನಕ್ಕೆ ಆದೇಶಿಸಿದೆ.
ಘಟನೆ ದಿನ ಪೊಲೀಸರಿಗೆ 2,450 ಆಹಾರ ಪೊಟ್ಟಣ ಸಿದ್ದಪಡಿಸಲಾಗಿತ್ತು. ಆದರೆ ಪೊಲೀಸರು ಕಡಿಮೆ ಸಂಖ್ಯೆಯಲ್ಲಿದ್ದ ಕಾರಣ ಮಧ್ಯಾಹ್ನ 600 ಮಂದಿ ಮಾತ್ರ ಆಹಾರ ಪೊಟ್ಟಣ ಸ್ವೀಕರಿಸಿದ್ದರು. ರಾತ್ರಿ ಭೋಜನಕ್ಕೆ ಮಾತ್ರ 2,450 ಆಹಾರ ಪೊಟ್ಟಣ ಸ್ವೀಕರಿಸಿದ್ದರು. ಮಧ್ಯಾಹ್ನ 3:30ಕ್ಕೆ ಗೇಟ್ ತೆರೆದ ಬಳಿಕವೂ ಅಭಿಮಾನಿಗಳ ದಟ್ಟಣೆ ಹೆಚ್ಚಿತ್ತು. ಬಳಿಕ ಬಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ ಎಂದು ಆರೋಪಿಸಿದೆ.