ಬಹುಭಾಷಾ ನಟ, ನಿರ್ದೇಶಕ ಪ್ರಭುದೇವ ತಾಯಿ ಆಸೆ ಈಡೇರಿಸಿದ್ದಾರೆ. ತಮ್ಮ ಹುಟ್ಟೂರಿನ ಮಲೈ ಮಹದೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮಾಡಿದ್ದಾರೆ. ಅದರ ಖರ್ಚು ಪ್ರಭುದೇವ ಭರಿಸಿದ್ದಾರೆ ಎನ್ನಲಾಗಿದೆ. ಪೂಜೆಯಲ್ಲಿ ಪ್ರಭುದೇವ ಹಾಗೂ ಅವರ ಪತ್ನಿಯೂ ಸಹ ಭಾಗಿ ಆಗಿದ್ದಾರೆ. ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದದಲ್ಲಿ ದೇವಸ್ಥಾನಲ್ಲಿ ಹೋಮ ಹವನ ಪೂಜೆ ಪುನಸ್ಕಾರದಲ್ಲಿ ಪ್ರಭುದೇವ ಕುಟುಂಬಸ್ಥರು ಭಾಗಿಯಾಗಿದೆ.
ಪ್ರಭುದೇವ ಅವರ ತಾಯಿ ಮಹದೇವಮ್ಮ ಅವರು ಕೆಂಬಾಳು ಗ್ರಾಮದಲ್ಲಿ ಜಮೀನು ಖರೀದಿ ಮಾಡಿದ್ದರು. ಈ ಜಮೀನಿನ ಪಕ್ಕದಲ್ಲೇ ಇದ್ದ ಮಲೆ ಮಹದೇಶ್ವರ ದೇವಸ್ಥಾನ ಶಿಥಿಲಾವಸ್ಥೆಯಲ್ಲಿತ್ತು. ಚೋಳರ ಕಾಲದ ದೇವಸ್ಥಾನ ಅತ್ಯಂತ ಪ್ರಖ್ಯಾತಿ ಪಡೆದಿತ್ತು. ಹೀಗಾಗಿ ಗ್ರಾಮಸ್ಥರು ಶಿಥಿಲಾವಸ್ಥೆಯಲ್ಲಿದ್ದ ಅದೇ ದೇವಾಲದಲ್ಲಿ ಪೂಜಾ ಕೈಂಕರ್ಯ ನೆರವೇರಿಸುತ್ತಿದ್ದರು. ಸದ್ಯ ತನ್ನ ತಾಯಿ ಆಸೆಯಂತೆ, ಗ್ರಾಮಸ್ಥರ ಬಯಕೆಯಂತೆ ನಟ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸಿದ್ದಾರೆ.