ಬೆಂಗಳೂರು:- ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ NIA ಯಶಸ್ವಿಯಾಗಿದೆ.
ಕೇಂದ್ರದಲ್ಲಿ ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜೋಶಿ!
ಅಬ್ದುಲ್ ರೆಹಮಾನ್ ಬಂಧಿತ ಆರೋಪಿ. ಈತನನ್ನು ಕೇರಳದ ಕಣ್ಣೂರು ಏರ್ಪೋರ್ಟ್ ನಲ್ಲಿ ಬಂಧಿಸಲಾಗಿದೆ. ಕತಾರ್ ನಿಂದ ಆಗಮಿಸಿದ ವೇಳೆ ಅರೆಸ್ಟ್ ಮಾಡಲಾಗಿದೆ. ಆರೋಪಿಯು, ೨ ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯ ಎಡೆಮುರಿ ಕಟ್ಟುವಲ್ಲಿ NIA ಯಶಸ್ವಿಯಾಗಿದೆ.
ಘಟನೆ ಹಿನ್ನೆಲೆ:
2022ರ ಜುಲೈನಲ್ಲಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಇದು ಪಿಎಫ್ಐ ಸಂಘಟನೆಯ ಸದಸ್ಯರ ಕುಕೃತ್ಯ ಎಂಬುದು ತಿಳಿದುಬಂದಿದ್ದರಿಂದ ಆಗ ರಾಜ್ಯ ಸರ್ಕಾರ, ಇದನ್ನು ಎನ್ಐಗೆ ವಹಿಸಿತ್ತು. ಆಗಿನಿಂದಲೂ ತನಿಖೆ ನಡೆಸುತ್ತಿರುವ ಎನ್ಐಎ ಇದುವರೆಗೆ ಹಲವರನ್ನು ಅರೆಸ್ಟ್ ಮಾಡಲಾಗಿತ್ತು. ಇನ್ನೂ ಹಲವರು ತಲೆಮರೆಸಿಕೊಂಡಿದ್ದು, NIA ತನಿಖೆ ಚುರುಕುಗೊಳಿಸಿದೆ. ಇದೀಗ ಪ್ರಮುಖ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.