ಹಾಸನ: ಈ ದೇಶ ಉಳಿಯಬೇಕಾದರೆ ಪ್ರಧಾನಿ ಮೋದಿಯವರು ಇರಲೇಬೇಕು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನವರು ಹಾಸನ – ಮೈಸೂರು ರೈಲ್ವೆ ಯೋಜನೆ ಸ್ಥಗಿತ ಮಾಡಿದ್ದರು. ಆದರೆ ದೇವೇಗೌಡರು ಪ್ರಧಾನಿಯಾಗಿ ಹತ್ತೆ ತಿಂಗಳಿಗೆ ಆ ಯೋಜನೆ ಮಾಡಿದ್ರು.
ಕಾಂಗ್ರೆಸ್‍ನವರು ಈ ಜಿಲ್ಲೆಯಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಈ ಜಿಲ್ಲೆ ಲೂಟಿಕೋರರ ಕೈ ಸೇರಿದೆ. ನಾನೂ ಇಲ್ಲೇ ಇರ್ತಿನೆ, ಇದೆಲ್ಲಾ ಎಷ್ಟು ದಿನ ಇರುತ್ತದೆ ನೋಡೋಣ. ಈ ದೇಶ ಉಳಿಯಬೇಕಾದರೆ ಮೋದಿಯವರು ಇರಲೇಬೇಕು. ಅವರಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದಿದ್ದಾರೆ.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಕೆಲವು ಅಧಿಕಾರಿಗಳು ರೇವಣ್ಣ ಹಾಗೂ ದೇವೇಗೌಡರದು ಮುಗೀತು ಎಂದು ತಿಳಿದುಕೊಂಡಿದ್ದಾರೆ. ಹಿಂದೆ ಕೂಡ ಜಿಲ್ಲೆಯಲ್ಲಿ ಎಲ್ಲಾ ಸ್ಥಾನ ಸೋತಿದ್ದೆವು. ಬಳಿಕ ಐದೇ ವರ್ಷಕ್ಕೆ ದೇವೇಗೌಡರು ಅಧಿಕಾರಕ್ಕೆ ಬಂದಿದ್ದರು. ಹಾಸನಕ್ಕೆ ದೇವೇಗೌಡರ ಕೊಡುಗೆ ಏನು ಅಂತಾರೆ. ರೈಲ್ವೆ ಯೋಜನೆ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು, ನಸಿರ್ಂಗ್ ಕಾಲೇಜು ಮಾಡಿದ್ದು ಯಾರು? ಹಾಸನ ಜಿಲ್ಲೆಯ ಶಿಕ್ಷಣಕ್ಕೆ ಕುಮಾರಸ್ವಾಮಿ ಐದು ಸಾವಿರ ಕೋಟಿ ರೂ. ಕೊಟ್ಟಿದ್ರು ಎಂದಿದ್ದಾರೆ.