ಬೆಂಗಳೂರು: ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರಸಕ್ತ ಕಾನೂನಿನಡಿ ಕೆಲಸದ ಅವಧಿ 9 ತಾಸು ಇದೆ. ಹೊಸ ಪ್ರಸ್ತಾವನೆಯಂತೆ ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ.
ಈ 10 ತಾಸುಗಳ ಕೆಲಸದ ಅವಧಿಯಲ್ಲಿ ಒಂದು ತಾಸಿನ ಭೋಜನ ವಿರಾಮವೂ ಸೇರಿದೆ. ಆ ಮೂಲಕ ಕೆಲಸ ಮಾಡುವ ಅವಧಿ 9 ತಾಸು ಮಾತ್ರ ಉಳಿಯಲಿದೆ ಎಂದು ಸಚಿವರು ಹೇಳಿದ್ದಾರೆ. ಪ್ರಸ್ತಾವನೆಯ ಮೂಲ ಉದ್ದೇಶ ಉದ್ಯೋಗಿಗಳು, ಉದ್ಯೋಗದಾತ ಇಬ್ಬರಿಗೂ ಆಯ್ಕೆಗಳನ್ನು ನೀಡುವುದಾಗಿದೆ.
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಈ ಬದಲಾವಣೆ ಮೂಲಕ ಕಾನೂನು ಪ್ರಕಾರ ಕೆಲ ದಿನಗಳಲ್ಲಿ ಉದ್ಯೋಗಿ ವಾರದಲ್ಲಿ 48 ತಾಸು ಕೆಲಸ ಮಾಡುವ ಅಗತ್ಯತೆಯನ್ನೂ ಪೂರೈಸುವ ವ್ಯವಸ್ಥೆ ಕಲ್ಪಿಸಲಿದೆ. ರಾಜ್ಯ ಸರ್ಕಾರ ಎಲ್ಲಾ ಸಿಬ್ಬಂದಿ ವರ್ಗದ ಹಿತರಕ್ಷಣೆಗೆ ಬದ್ಧವಾಗಿದೆ ಎಂದಿದ್ದಾರೆ.